28ರಂದು ಬಿವೈವಿ ನೇತೃತ್ವದಲ್ಲಿ ಪ್ರತಿಭಟನೆ

BJP-0000
Published on

ಚಿತ್ರದುರ್ಗ:ರಾಜ್ಯಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ವಿರೋಧಿಸಿ,ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿ ಹಾಗೂ ಪೆಟ್ರೋಲ್,ಇಂಧನ ದರ ಹೆಚ್ಚಳ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇ ತೃತ್ವದಲ್ಲಿ ಜೂ.28ರಂದು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಯಲಿದೆ.
ಅಂದು ಪಕ್ಷದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ ಎಂದು ಪಕ್ಷ ದ ಮೂಲಗಳು ತಿಳಿಸಿವೆ. ರಾಜ್ಯ ವಿಧಾನಸಭೆಯ ಮುಂಗಾರು ಅ ಧಿವೇಶನ ಪೂರ್ವದಲ್ಲಿ ಬಿಜೆಪಿ ಧುರೀಣರು ಐದು ತಂಡಗಳಾಗಿ ರಾಜ್ಯಾದ್ಯಂತ ಪ್ರವಾಸ ಹಮ್ಮಿ ಕೊಂಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಜೂ.27ರಂದು ಬೆಂಗಳೂರಲ್ಲಿ ಪಕ್ಷದ ಸಭೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net