

ಬಾಗಲಕೋಟೆ: ರಾಣಿ ಚನ್ನಮ್ಮ ಸಮಿತಿ ಹಾಗೂ ರಬಕವಿ-ಬನಹಟ್ಟಿ ತಾಲೂಕಾ ಪಂಚಮಸಾಲಿ ಸಮಾಜ ಆಶ್ರಯದಲ್ಲಿ ವೀರ ರಾಣಿ ಕಿತ್ತೂರ ರಾಣಿ ಚೆನ್ನಮ್ಮನ ೨೪೭ ನೇ ಜಯಂತ್ಯೋತ್ಸವ, ೨೦೧ ನೇ ವಿಜಯೋತ್ಸವ ಕಾರ್ಯಕ್ರಮ ಅ.೪ ರಂದು ೧೦.೩೦ ಗಂಟೆಗೆ ಮಹಾಲಿಂಗಪುರ ಸಮೀಪದ ಮದಭಾಂವಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿಯೇ ಅತಿ ದೊಡ್ಡದಾದ ರಾಣಿ ಚನ್ನಮ್ಮಳ ಕಂಚಿನ ಮೂರ್ತಿ ಇದೇ ಅನಾವರಣಗೊಳ್ಳಲಿದೆ. ಇದಕ್ಕೂ ಮುನ್ನ ಬೆಳಗ್ಗೆ ೭ ಗಂಟೆಗೆ ಮುತೈದೆಯರಿಂದ ಆರುತಿ, ಕುಂಭ ಮೆರವಣಿಗೆಯು ರೊಟ್ಟಿ ಬುತ್ತಿ ಎತ್ತಿನ ಬಂಡಿ ಸಕಲ ವಾದ್ಯ ವೈಭವಗಳೊಂದಿಗೆ ನಡೆಯಲಿದೆ.
ನಂತರ ಸಭಾ ಕಾರ್ಯಕ್ರಮ ನಡೆಯಲಿದ್ದು, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು, ಕೌಲಗುಡ್ಡದ ಸಿದ್ದಯೋಗಿ ಅಮರೇಶ್ವರ ಮಹಾಸ್ವಾಮಿಗಳು, ಅರ್ಚಕ ನಾಗಯ್ಯ ಮಠಪತಿ ಸಾನ್ನಿಧ್ಯ ವಹಿಸಲಿದ್ದಾರೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ(ಯತ್ನಾಳ), ತಾಲೂಕಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಶ್ರೀಶೈಲ ದಲಾಲ ಅಧ್ಯಕ್ಷತೆ ವಹಿಸುವರು. ಸಚಿವೆ ಲಕ್ಷಿ÷್ಮÃ ಹೆಬ್ಬಾಳ್ಕರ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಸಿದ್ದು ಸವದಿ, ವಿಪ ಸದಸ್ಯ ಹಣಮಂತ ನಿರಾಣಿ ಉದ್ಘಾಟಿಸಲಿದ್ದಾರೆ. ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಸಂಸದ ಪಿ.ಸಿ.ಗದ್ದಿಗೌಡರ, ವಿಪ ಸದಸ್ಯರಾದ ಉಮಾಶ್ರೀ, ಪಿ.ಎಚ್.ಪೂಜಾರ, ಚನ್ನರಾಜ ಹಟ್ಟಿಹೊಳಿ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಧರೆಪ್ಪ ಸಾಂಗಲಿಕರ ಜ್ಯೋತಿ ಬೆಳಗಿಸಲಿದ್ದಾರೆ.
ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಜಮಖಂಡಿ ಶಾಸಕ ಜಗದೀಶ ಗುಡಗುಂಟಿಮಠ, ಕಿಸಾನ ಕಾಂಗ್ರೆಸ್ ರಾಜ್ಯ ಸಂಚಾಲಕ ಸಿದ್ದು ಕೊಣ್ಣೂರ, ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಎಎಪಿ ಸಂಘಟನಾ ಕಾರ್ಯದರ್ಶಿ ಅರ್ಜುನ ಹಲಗಿಗೌಡರ, ನ್ಯಾಯವಾದಿ ಮಹಾಂತೇಶ ಉರಬಿನ್ನವರ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಮುಖಂಡರಾದ ಸದಾಶಿವ ಪಟ್ಟಣಶೆಟ್ಟಿ, ಡಾ.ಎ.ಆರ್.ಬೆಳಗಲಿ, ಮಹಾದೇವ ಮಾರಪೂರ, ಸಿದ್ದುಗೌಡ ಪಾಟೀಲ, ಲಕ್ಕಪ್ಪ ಪಾಟೀಲ, ಬಸವರಾಜ ನಾಗನೂರ, ಚೆನ್ನಪ್ಪ ಪಟ್ಟಣಶೆಟ್ಟಿ, ವಿನೋದ ಉಳ್ಳಾಗಡಿ, ಶ್ರೀಶೈಲ ಅರಭಾಂವಿ ಆಗಮಿಸಲಿದ್ದಾರೆ ಎಂದು ಮದಭಾಂವಿಯ ರಾಣಿ ಚೆನ್ನಮ್ಮ ಕಮೀಟಿ ಉಪಾಧ್ಯಕ್ಷ ಶಿವಪ್ಪ ಉರಬಿನ್ನವರ, ಕಾರ್ಯದರ್ಶಿ ಶ್ರೀಶೈಲ ಒಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.