

ಧಾರವಾಡ: ಜಿಲ್ಲೆಯಲ್ಲಿ ಸೋಮವಾರ ಸಂಜೆಯಿಂದ 24 ಗಂಟೆ ಅವಧಿಯಲ್ಲಿ 295 ಶಂಕಿತರು ಪತ್ತೆಯಾಗಿದ್ದು, ಅವರ ಗಂಟಲ ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಶಂಕಿತರ ಜತೆಗೆ ನಿಗಾ ವಹಿಸಿದವರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಸೋಮವಾರ ಇದ್ದ 13,464 ನಿಗಾ ವಹಿಸಿದವರ ಸಂಖ್ಯೆ ಮಂಗಳವಾರ 13,764ಕ್ಕೆ ಏರಿಕೆಯಾಗಿದೆ.
ಈವರೆಗೆ ಜಿಲ್ಲೆಯಲ್ಲಿ 13,033 ಶಂಕಿತ ವ್ಯಕ್ತಿಗಳ ಗಂಟಲ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 12,432 ಜನರ ವರದಿ ನೆಗೆಟಿವ್ ಬಂದಿವೆ. 43 ಪ್ರಕರಣಗಳು ಪಾಸಿಟಿವ್ ಬಂದಿದ್ದು, 33 ಜನರಿಗೆ ಕಿಮ್್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 10 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 568 ವರದಿಗಳು ಬರಬೇಕಿವೆ.
ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯು ವಿದೇಶದಿಂದ ಆಗಮಿಸಿರುವ ಹಾಗೂ ಅವರ ಸಂಪರ್ಕಕ್ಕೆ ಒಳಗಾದ 13764 ಜನರ ಮೇಲೆ ನಿಗಾ ಇಟ್ಟಿದೆ. ಈ ಪೈಕಿ 5534 ಜನರು ಮನೆಯಲ್ಲೇ ಪ್ರತ್ಯೇಕವಾಗಿ (14 ದಿನ) ವಾಸವಾಗಿದ್ದಾರೆ. ಆಸ್ಪತ್ರೆ ಪ್ರತ್ಯೇಕ ವಾರ್ಡಗಳಲ್ಲಿ 33 ಜನ ದಾಖಲಾಗಿದ್ದಾರೆ. 4989 ಜನರು 14 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದರೆ, 3208 ಜನರು 28 ದಿನಗಳ ಪ್ರತ್ಯೇಕ ವಾಸ ಪೂರ್ಣಗೊಳಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.