29ರಂದು ನಾರಾಯಣ ಗುರು ಜಯಂತಿ

bhramashri narayana guru (1)
Published on

ಆನಂದಪುರ: ಪಟ್ಟಣದ ಬಸವನ ಬೀದಿಯಲ್ಲಿರುವ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಸೆ.29ರಂದು ಬೆಳಗ್ಗೆ 11 ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ. ಗರ್ತಿಕೆರೆಯ ನಿಟ್ಟೂರಿನ ಶ್ರೀರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಹೋಬಳಿ ಘಟಕದ ಅಧ್ಯಕ್ಷ ಗೌತಮಪುರದ ಬಂಗಾರಪ್ಪ ದಾಸನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವ ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಜಿಪಂ ಮಾಜಿ ಸದಸ್ಯ ರತ್ನಾಕರ ಹೊನಗೋಡು, ಆನಂದಪುರ ಗ್ರಾಪಂ ಅಧ್ಯಕ್ಷ ಮೋಹನ್ ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 9ಕ್ಕೆ ಯಡೇಹಳ್ಳಿ ವೃತ್ತದಿಂದ ಶ್ರೀಸೀತಾರಾಮ ಸಭಾ ಭವನದವರೆಗೆ ನಾರಾಯಣ ಗುರುಗಳ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ ಎಂದು ಆನಂದಪುರ ಹೋಬಳಿ ಘಟಕದ ಕಾರ್ಯದರ್ಶಿ ದೇವು ಬೀಸನಗದ್ದೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net