

ಮೈಸೂರು: ಬಿಜೆಪಿ ಕೃಷ್ಣರಾಜ ಕ್ಷೇತ್ರದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ಅ.29ರಂದು ಮಧ್ಯಾಹ್ನ 3ಕ್ಕೆ ವಿದ್ಯಾರಣ್ಯಪುರಂನ ಬೂತಾಳೆ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಮಧ್ಯಾಹ್ನ 1.30ಕ್ಕೆ ನಂಜನಗೂಡಿನಿಂದ ಆಗಮಿಸುವ ಅಧ್ಯಕ್ಷರನ್ನು ರಿಂಗ್ ರಸ್ತೆಯಿಂದ ಯುವ ಮೋರ್ಚಾದ ತಂಡದವರು ಬೈಕ್ ರ‌್ಯಾಲಿ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಕರೆತರಲಿದ್ದಾರೆ. ಮಧ್ಯಾಹ್ನ 3ಕ್ಕೆ ನಡೆಯುವ ಕೃಷ್ಣರಾಜ ಕ್ಷೇತ್ರದ 270 ಬೂತ್‌ಗಳ ಅಧ್ಯಕ್ಷರು ಹಾಗೂ ಬಿಎಲ್‌ಎ-2 ಸೇರಿದಂತೆ 540 ಕಾರ್ಯಕರ್ತರೊಂದಿಗೆ ಸಂವಾದ ಹಾಗೂ ಸಂಘಟನಾತ್ಮಕ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 4ಕ್ಕೆ ಕೃಷ್ಣರಾಜ ಕ್ಷೇತ್ರದ 270 ಬೂತ್ ಸಮಿತಿ ಹಾಗೂ ಪಂಚರತ್ನ ಪ್ರಮುಖರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳನ್ನು ಒಳಗೊಂಡ ಸುಮಾರು ಐದು ಸಾವಿರ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಂ.ವಡಿವೇಲು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಜೆ 6ಕ್ಕೆ ಶಾಸಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಶಾಸಕ ಎಸ್.ಎ.ರಾಮದಾಸ್ ಸೇರಿದಂತೆ ಸಚಿವರು, ಪಕ್ಷದ ರಾಜ್ಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.