29ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

Published on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಅ.29ರಂದು ಬೆಳಗ್ಗೆ 11ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ಉಪಸ್ಥಿತಿ ಇರುವರು. ಶಾಸಕ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಎಸ್. ಜಯಣ್ಣ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಮರಿಸ್ವಾಮಿ, ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನ), ನಗರಸಭೆ ಅಧ್ಯಕ್ಷ ಎಸ್.ಸುರೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ ಚಂದ್ರು, ನಗರಸಭಾ ಉಪಾಧ್ಯಕ್ಷ ಎಚ್.ಎಸ್. ಮಮತಾ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net