29ರಂದು ಹೇಮರಡ್ಡಿ ಮಲ್ಲಮ್ಮ ಜಯಂತಿ

Untitled--0008
Published on

ಚಿತ್ರದುರ್ಗ:ಜಿಲ್ಲಾವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದಿಂದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಮೇ29ರಂದು ಬೆಳಗ್ಗೆ 11.30ಕ್ಕೆ ನಗರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾ ಗಿದೆ. ರಾಜ್ಯವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಸಮಾರಂಭ ಉದ್ಘಾಟಿಸಲಿ ದ್ದಾರೆ. ಜಿಲ್ಲಾಧ್ಯಕ್ಷ ಜಿ.ಚಿದಾನಂದಪ್ಪ ಅಧ್ಯಕ್ಷತೆ ವಹಿಸುವರು. ಗೌರವಾಧ್ಯಕ್ಷ ನಾಗಿರೆಡ್ಡಿ,ಎಚ್.ಮಹೇಶ್ವರಪ್ಪ ಪಾಲ್ಗೊಳ್ಳಲಿದ್ದಾರೆ.
ನಿವೃತ್ತ ವಿಷಯ ಪರಿವೀಕ್ಷಕ ಶಿವಪ್ರಸಾದ್ ಉಪನ್ಯಾಸ ನೀಡುವರು. ಸಮಾರಂಭದ ನಂತರ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಲಿ ದೆ. ಅಂದು ಬೆಳಗ್ಗೆ 9ಗಂಟೆಗೆ ನಗರದಲ್ಲಿ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರ ಮೆರವಣಿಗೆ ಜರುಗಲಿದೆ ಎಂದು ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net