29ರಂದು ಹ್ಯಾಂಡ್‌ಬಾಲ್ ಪಂದ್ಯಾವಳಿ ಉದ್ಘಾಟನೆ

CTD MLA 002
Published on

ಚಿತ್ರದುರ್ಗ: ಕಾಲೇಜು ಶಿಕ್ಷಣ ಇಲಾಖೆ,ದಾವಣಗೆರೆ ವಿವಿ ಮತ್ತು ವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಸಹಯೋಗದಲ್ಲಿ ದಾವಣಗೆರೆ ವಿವಿ ಅಂತರ್ ಕಾಲೇಜುಗಳ ಹ್ಯಾಂಡ್‌ಬಾಲ್ ಹಾಗೂ ಪುರುಷ ಮತ್ತು ಮಹಿಳೆಯರ ವಿವಿ ತಂಡದ ಆಯ್ಕೆ ಪಂದ್ಯಾವಳಿಯನ್ನು ನ.29ರಂದು ಬೆಳಗ್ಗೆ 9.30ಕ್ಕೆ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ. ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಉದ್ಘಾಟಿಸುವರು. ಪ್ರಾಂಶುಪಾಲ ಡಾ.ಎಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ವಿವಿಧ ಗಣ್ಯರು ಉಪಸ್ಥಿತರಿರುವರು. ಸಂಜೆ 4ಕ್ಕೆ ಸಮಾರೋಪ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net