

ಹಳಿಯಾಳ: ಬೆಳಗಾವಿಯ ವಲಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಪಟ್ಟಣದ ಕೆಎಲ್ಎಸ್ ವಿಡಿಐಟಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ತಂಡವು ದ್ವಿತೀಯ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಕಾಲೇಜು ಪ್ರಾಚಾರ್ಯ ಡಾ. ವಿ.ಎ. ಕುಲಕರ್ಣಿ ತಿಳಿಸಿದ್ದಾರೆ.
ನಿಪ್ಪಾಣಿಯ ವಿಎಸ್‌ಎಂಎಸ್ ಆರ್‌ಕೆ ಐಟಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅ.18ರಂದು ನಡೆದ ಪಂದ್ಯಾವಳಿಯಲ್ಲಿ ಕಾಲೇಜ್ ತಂಡ ಸಾಧನೆ ಮಾಡಿದೆ.
ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಷಣ್ಮುಖ ಜಿ, ಗಿರೀಶ ಪಿ, ಅಶ್ವಥ್ ಪಿ, ಕುಲದೀಪ ಡಿ, ವಿಶಾಲ ಎಂ, ಸೂರಜ್ ಎಂ, ವಿನಾಯಕ ಪಿ, ಮಲ್ಲಿಕಾರ್ಜುನ ಎ, ಸಾಗರ ಎಸ್., ಗಂಗಾಧರ ಎಚ್, ಪ್ರವೀಣ ಬಿ ಅವರು ತಂಡವನ್ನು ಪ್ರತಿನಿಧಿಸಿದ್ದರು. ತುಮಕೂರು ಜಿಲ್ಲೆಯ ಗುಬ್ಬಿ ಸಿಐಟಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಪಂದ್ಯಾವಳಿ ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.