ಶಟಲ್ ಬ್ಯಾಟ್ಮಿಂಟನ್‌ನಲ್ಲಿ ದ್ವಿತೀಯ ಸ್ಥಾನ

9 Dwd 2 Shuttle Badminton
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಟ್ಮಿಂಟನ್‌ನಲ್ಲಿ ಇಲ್ಲಿನ ಪ್ರಿಸಮ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದಿದೆ. ಕಾಲೇಜಿನ ಕ್ರೀಡಾಪಟು ಮಾಧುರಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಸಾಧಕ ವಿದ್ಯಾರ್ಥಿಗಳನ್ನು ನಿರ್ದೇಶಕ ಶ್ರೀನಿವಾಸ ತಿಮ್ಮನಗೌಡರ, ಕಾರ್ಯದರ್ಶಿ ವೀಣಾ ತಿಮ್ಮನಗೌಡರ, ಪ್ರಾಚಾರ್ಯ ಎಸ್.ಎಂ. ಹುಲ್ಲೂರ, ದೈಹಿಕ ನಿರ್ದೇಶಕ ವೈ.ಎಂ. ಮಾಸ್ತಿ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net