

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚರಿಸಲಿರುವ ಎರಡನೇ ರೈಲು ಪಶ್ಚಿಮ ಬಂಗಾಳದ ತಿತಾರ್ ಕಂಪನಿಯಿಂದ ಆಗಸ್ಟ್ ಅಂತ್ಯಕ್ಕೆ ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಹೆಬ್ಬಗೋಡಿ ಡಿಪೋ ತಲುಪುವ ನಿರೀಕ್ಷೆಯಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೀನಾದಿಂದ ಕಳುಹಿಸಿಕೊಡಲಾಗಿದ್ದ ಮೊದಲ ರೈಲು ಫೆಬ್ರವರಿಯಲ್ಲಿ ಬೆಂಗಳೂರು ತಲುಪಿತ್ತು. ಈ ರೈಲು ಮಾರ್ಚ್ ಮೊದಲ ವಾರದಿಂದ ಪರೀಕ್ಷಾರ್ಥವಾಗಿ ಸಂಚರಿಸಿದೆ. ಸದ್ಯ ಆರ್.ವಿ. ರಸ್ತೆ& ಬೊಮ್ಮಸಂದ್ರ ಸಂಪರ್ಕಿಸುವ ಹಳದಿ ಮಾರ್ಗದಲ್ಲಿ ಪ್ರಾಯೋಗಿಕ ವಿದ್ಯುದಿಕರಣ ಪ್ರಕ್ರಿಯೆ ನಡೆಯುತ್ತಿದೆ. ಮೆಟ್ರೋ ವಯಡಕ್ಟ್ ಮೂಲಕ 33 ಕಿಲೋವಾಟ್ ವಿದ್ಯುತ್ ಕೇಬಲ್ಗಳು ಹಾದುಹೋಗಿದ್ದು, ವಿವಿಧ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ತಜ್ಞರ ತಂಡ ವಿವಿಧ ಆಯಾಮಗಳಲ್ಲಿ ಪರಿಶೀಲಿಸಿ, ಲೋಪದೋಷಗಳನ್ನು ಪಟ್ಟಿ ಮಾಡುತ್ತಿದೆ.
ಆಗಸ್ಟ್ನಲ್ಲಿ 2ನೇ ರೈಲಿನ ಆಗಮನವಾಗುತ್ತಿದ್ದಂತೆ ಪರೀಾರ್ಥ ಸಂಚಾರ ಇನ್ನಷ್ಟು ವೇಗ ಪಡೆದುಕೊಳ್ಳಲಿದೆ. ರೈಲಿನ ವೇಗ, ನಿಲ್ದಾಣದಿಂದ ನಿಲ್ದಾಣಕ್ಕೆ ತಲುಪುವ ಸಮಯ ಇತ್ಯಾದಿ ಅಂಶಗಳ ಬಗ್ಗೆ ಪರಿಶೀಲಿಸಲಾಗುತ್ತದೆ. ಅಗತ್ಯ ಪರೀಕ್ಷೆ ಪೂರ್ಣಗೊಂಡ ಬಳಿಕ ತಜ್ಞರ ಶಿಾರಸುಗಳನ್ನು ಆಧರಿಸಿ, ಸೆಪ್ಟೆಂಬರ್ ಅಂತ್ಯದಿಂದ ಪ್ರಾಯೋಗಿಕ ಸಂಚಾರ ಆರಂಭವಾಗುವ ಸಾಧ್ಯತೆಯಿದೆ. ಇದು ಯಶಸ್ವಿಯಾಗುತ್ತಿದ್ದಂತೆ ವಾಣಿಜ್ಯ ಸೇವೆ ಪ್ರಾರಂಭಿಸಲು ರೈಲ್ವೆ ಮಂಡಳಿಯ ಅನುಮೋದನೆ ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.
ಜೂನ್ ಅಂತ್ಯದಿಂದ 45 ದಿನಗಳವರೆಗೆ ಸಿಗ್ನಲಿಂಗ್, ದೂರಸಂಪರ್ಕ ವ್ಯವಸ್ಥೆ, ವಿದ್ಯುತ್ ಸರಬರಾಜು ವ್ಯವಸ್ಥೆ ಸೇರಿ ಸಿಸ್ಟಮ್ ಪರೀಕ್ಷೆಗಳು ನಡೆಯಲಿವೆ. ಬಳಿಕ ಸುರಕ್ಷತಾ ಪರೀೆಗಳು, ರಿಸರ್ಚ್ ಡಿಸೈನ್ಸ್ ಮತ್ತು ಸ್ಟಾ$ಂಡರ್ಡ್ ಆರ್ಗನೈಸೇಶನ್ ಮೂಲಕ ಆಸಿಲೇಷನಲ್ ಟ್ರಯಲ್ಸ್, ಕಮಿಷನರ್ ಆ್ ಮೆಟ್ರೋ ರೈಲ್ ಸೇಫ್ಟಿ (ಸಿಎಮ್ಆರ್ಎಸ್) ಅವರಿಂದ ತಪಾಸಣೆ ನಡೆಯಲಿದೆ.