2ಎ ಮೀಸಲಾತಿ: ಸರ್ಕಾರಕ್ಕೆ ಎಚ್ಚರಿಕೆ

1652288275828
Published on

ವಿಜಯಪುರ: 2ಎ ಮೀಸಲಾತಿಗಾಗಿ ಸಾಕಷ್ಟು ಹೋರಾಟ ಮಾಡಲಾಗಿಯೂ ಸಹ ಸರ್ಕಾರ ಬೇಜವಾಬ್ದಾರಿ ಮಾಡುತ್ತಿದೆ. ಹಲವು ಬಾರಿ ಸರ್ಕಾರಕ್ಕೆ ಗಡುವು ನೀಡಲಾಗಿತ್ತು, ಆದ್ರೂ ನಮ್ಮ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ವಿಜಯಪುರದಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿದ ಪಂಚಮಸಾಲಿ ಸಮಾಜದ ಮುಖಂಡರು ಸಿಎಂ ಬಸವರಾಜ ಬೊಮ್ಮಾಯಿ ಬರಿ ಆಶ್ವಾಸನೆಗಳನ್ನು ಕೊಡುತ್ತಿದ್ದಾರೆ. ಇದೇ ರೀತಿ ಸುಳ್ಳು ಆಶ್ವಾಸನೆ ಕೊಟ್ರೆ ಮುಂಬರುವ ದಿನಗಳಲ್ಲಿ ಬೊಮ್ಮಾಯಿ ಅವರು ಮನೆಗೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಅಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಮಕಾಡೆ ಮಲಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಹೋರಾಟದ ಮುಂದಿನ ರೂಪುರೇಷೆ ನಿರ್ಮಿಸಲಾಗಿದ್ದು ಮುಂಬರುವ ದಿನಗಳಲ್ಲಿ ಎಲ್ಲ ತಹಶೀಲ್ದಾರ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ರು.ಪತ್ರಿಕಾಗೋಷ್ಠಿಯಲ್ಲಿ ಪಂಚಮಸಾಲಿ ಜಿಲ್ಲಾಧ್ಯಕ್ಷ ಬಿ ಎಂ ಪಾಟೀಲ್, ಮೀಸಲಾತಿ ಹೋರಾಟ ಸಮೀತಿ ಅಧ್ಯಕ್ಷ ಎಂ ಎಸ್ ರುದ್ರಗೌಡರ, ರಾಷ್ಟ್ರೀಯ ಯುವ ಅಧ್ಯಕ್ಷ ಶಂಕರಗೌಡ ಬಿರಾದಾರ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net