2ನೇ ದಿನವು ಮುಂದುವರೆದ ಧರಣಿ

2ನೇ ದಿನವು ಮುಂದುವರೆದ ಧರಣಿ
Published on

ಹಾಸನ: ಗ್ರಾಮೀಣ ಅಂಚೆ ನೌಕರರು ಕಾಯಂ ನೇಮಕಾತಿ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಮುಷ್ಕರ ಎರಡನೇ ದಿನವೂ ಕೂಡ ಮುಂದುವರೆದಿದೆ.
ನಗರದ ಸಿಟಿ ಬಸ್ ನಿಲ್ದಾಣ ಬಳಿ ಇರುವ ಮುಖ್ಯ ಅಂಚೆ ಕಚೇರಿ ಮುಂದೆ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ವತಿಯಿಂದ ಕಾಯಂ ಮಾಡುವಂತೆ ಹಾಗೂ ಕಮಲೇಶನ್ ಸಮಿತಿ ಶಿಪಾರಸ್ಸು ಮಾಡಿರುವ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.
ಗ್ರಾಮೀಣ ಭಾಗದ ಅಂಚೆ ನೌಕರರು ಹಲವು ವರ್ಷಗಳಿಂದ ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಮನವಿ ಮಾಡಿದರು ಕೂಡ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಆದ್ದರಿಂದ ನಾವು ಅನಿರ್ದಿಷ್ಟ ಅವಧಿ ಮುಷ್ಕರವನ್ನ ನಡೆಸುತ್ತಿದ್ದು ಇಂದಿಗೆ ಎರಡನೇ ದಿನದವಾಗಿದೆ ಸರ್ಕಾರ ಇದಕ್ಕೆ ಬಗ್ಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು
ಇದೆ ಸಂದರ್ಭದಲ್ಲಿ ಎ.ಐ.ಜಿ.ಡಿ.ಎಸ್.ಯು. ಸಂಘಟನೆಯ ಅಧ್ಯಕ್ಷ ಜಿ.ಬಿ. ಕಾಳೇಗೇಗೌಡ,ಕಾರ್ಯದರ್ಶಿ ಕೆ.ಜೆ. ಶಿವಾಜಿ, ಕಾರ್ಯಾಧ್ಯಕ್ಷ ಎಚ್.ಇ. ಜಯಣ್ಣ, ಸಂಘಟನಾ ಕಾರ್ಯದರ್ಶಿ ದಿನೇಶ್, ಮಲ್ಲೇಶ್, ಸತೀಶ್, ವಾಸು, ವಿನೋದ್ ಕುಮಾರ್, ಮಧು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net