2ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ

Revansiddappa Jalade
????????????????????????????????????
Published on

ಬೀದರ್: ವಿಕಾಸ ಅಕಾಡೆಮಿಯು ಇಲ್ಲಿಯ ಪ್ರತಾಪನಗರದ ಜನಸೇವಾ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸೆಪ್ಟೆಂಬರ್ 2 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30 ರ ವರೆಗೆ ನಾಡಿ ಪರೀಕ್ಷೆ ಮೂಲಕ ಆರೋಗ್ಯ ತಪಾಸಣೆ ಉಚಿತ ಶಿಬಿರ ಹಮ್ಮಿಕೊಂಡಿದೆ. ಪುಣೆಯ ಪ್ರಸಿದ್ಧ ವೈದ್ಯ ಡಾ. ವಾಸು ಅವರು ದೀರ್ಘ ಕಾಲದ ವ್ಯಾಧಿಗಳಿಗೆ ನಾಡಿ ಪರೀಕ್ಷೆ ಮೂಲಕ ಚಿಕಿತ್ಸೆ ನೀಡಲಿದ್ದಾರೆ ಎಂದು ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.

ಜಿಲ್ಲೆಯ ರೋಗಿಗಳ ಅನುಕೂಲಕ್ಕಾಗಿ ಅಕಾಡೆಮಿಯಿಂದ ಶಿಬಿರ ಹಮ್ಮಿಕೊಳ್ಳಲಾಗಿದೆ. ರೋಗಿಗಳು ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ. ಶಿಬಿರದಲ್ಲಿ ಪಾಲ್ಗೊಳ್ಳುವವರು ಈಗಾಗಲೇ ಚಿಕಿತ್ಸೆ ಪಡೆದ ವೈದ್ಯಕೀಯ ವರದಿಗಳಿದ್ದಲ್ಲಿ ತಮ್ಮೊಂದಿಗೆ ತರಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9448422734 ಅಥವಾ 9742296118 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net