ಸ್ಮಾರಕಗಳ ಸಂರಕ್ಷಣೆಗೆ 3.14 ಕೋಟಿ ರೂ. ವೆಚ್ಚ

Kageri
Published on

ಕಾರವಾರ: ಭಾರತ ಪುರಾತತ್ವ ಸರ್ವೇಕ್ಷಣಾ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ 32 ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸಲಾಗಿದ್ದು, ಅವುಗಳ ನಿರ್ವಹಣೆ ಹಾಗೂ ದುರಸ್ತಿಗೆ ಕಳೆದ ಮೂರು ರ‍್ಷಗಳಲ್ಲಿ 3.14 ಕೋಟಿ ರೂ.ಗಳನ್ನು ರೂ. ವೆಚ್ಚ ಮಾಡಲಾಗಿದೆ ಎಂದು ಪುರಾತತ್ವ ಸರ್ವೇಕ್ಷಣಾ ಇಲಾಖೆ ತಿಳಿಸಿದೆ.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಲಾಗಿದೆ. ಯಾವುದೇ ಸ್ಮಾರಕಗಳನ್ನು ಪಟ್ಟಿಯಿಂದ ಕೈಬಿಡುವ ಬಗ್ಗೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ತಿಳಿಸಲಾಗಿದೆ.
ಅರಣ್ಯ ಸಮಸ್ಯೆ ಚರ್ಚೆ:
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೆಹಲಿಯಲ್ಲಿ ಸೋಮವಾರ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಾಮ್ ಅವರನ್ನು ಭೇಟಿಯಾಗಿ ಅತಿಕ್ರಮಣದಾರರ ಹಕ್ಕು ಮಾನ್ಯ ಮಾಡುವಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಿಸಿದರು. ಅದಕ್ಕೆ ಸನ್ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net