3.42 ಲಕ್ಷ ರೂ. ಮೌಲ್ಯದ ಗಾಂಜಾ ವಶ

ganja (1)
Published on

ಔರಾದ್: ಸೋರಳ್ಳಿ ಕ್ರಾಸ್ ಬಳಿ ಶನಿವಾರ ಸಂಜೆ ದಾಳಿ ನಡೆಸಿದ ಪೊಲೀಸರು, ಅಕ್ರಮವಾಗಿ ಸಾಗಿಸುತ್ತಿದ್ದ 3,42,650 ರೂ. ಮೌಲ್ಯದ 31 ಕೆಜಿ ಗಾಂಜಾ ವಶಪಡಿಸಿಕೊಂಡು ಒಬ್ಬನನ್ನು ಬಂಧಿಸಿದ್ದಾರೆ. ಸೋರಳ್ಳಿ ಕ್ರಾಸ್ ಹತ್ತಿರದ ಹೊಲದ ಮೂಲಕ ಮೂವರ ತಂಡ ಅಕ್ರಮವಾಗಿ ಗಾಂಜಾ ಸಾಗಿಸುತ್ತಿರುವ ಮಾಹಿತಿ ಪಡೆದ ಡಿವೈಎಸ್ಪಿ ಡಾ.ದೇವರಾಜ್ ನೇತೃತ್ವದಲ್ಲಿ ಪೊಲೀಸರು ತೆಲಂಗಾಣದ ಕರ್ಜಗುತ್ತಿ ತಾಂಡಾ ನಿವಾಸಿ ಭೀಮಸಿಂಗ್ ಧನಸಿಂಗ್ ಎಂಬಾತನನ್ನು ಬಂಧಿಸಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಪೋಲಿಸರು ವಶಕ್ಕೆ ಪಡೆದಿದ್ದರು. ಇನ್ನುಳಿದ ಇಬ್ಬರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದು, ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದಾಗ ಡಿವೈಎಸ್ಪಿ ಡಾ.ದೇವರಾಜ್ ತಮ್ಮ ರಿವಾಲ್ವರ್ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು. ಪರಾರಿಯಾದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಸಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಸೀಲ್ದಾರ್ ಚಂದ್ರಶೇಖರರಾವ, ಪಿಎಸ್ಐ ಮಹೇಂದ್ರ, ಗ್ರಾಮ ಲೆಕ್ಕಿಗ ಅನ್ವರ್ ಕಾರ್ಯಾಚರಣೆ ವೇಳೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net