3.5 ಕೋಟಿ ರೂ. ವೆಚ್ಚದಲ್ಲಿ ಸ್ಕೇಟಿಂಗ್ ರಿಂಗ್ ಕಾಮಗಾರಿಗೆ ಚಾಲನೆ

17
Published on

ಮೈಸೂರು: ಹೆಬ್ಬಾಳು ಎರಡನೇ ಹಂತದ ಸಿಐಟಿಬಿ ಕಲ್ಯಾಣ ಮಂಟಪದ ಬಳಿ ಇರುವ ಆಟದ ಮೈದಾನದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸ್ಕೇಟಿಂಗ್ ರಿಂಗ್ ಕಾಮಗಾರಿಗೆ ಸಂಸದ ಪ್ರತಾಪಸಿಂಹ ಶನಿವಾರ ಚಾಲನೆ ನೀಡಿದರು.
ಮಕ್ಕಳಿಗೆ ಆಟದಲ್ಲಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನರ್ಮ್ ಯೋಜನೆಯಡಿ ಈ ಕಾಮಗಾರಿ ಆರಂಭಿಸಲಾಗುತ್ತಿದೆ. 3 ತಿಂಗಳಲ್ಲಿ ಕಾಮಗಾರಿ ಮುಗಿಸಲು ಉದ್ದೇಶಿಸಿದ್ದು, ಅಂತಾರಾಷ್ಟ್ರೀಯ ಗುಣಮಟ್ಟದ ಸ್ಕೇಟಿಂಗ್ ತರಬೇತಿ ಪಡೆಯಲು ಇದರಿಂದ ಸುತ್ತಮುತ್ತಲಿನ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಮಕ್ಕಳಲ್ಲಿ ದೈಹಿಕ ಚಟುವಟಿಕೆ ಕಡಿಮೆ ಆಗಿ ಟಿವಿ, ಮೊಬೈಲ್‌ಗಳಲ್ಲಿ ಮುಳುಗಿ ಹೋಗುತ್ತಿದ್ದಾರೆ. ಹಾಗಾಗಿ ಇಲ್ಲಿ ಬಂದು ಸ್ಕೇಟಿಂಗ್ ಕಲಿತರೆ ಅವರ ಭವಿಷ್ಯಕ್ಕೆ ಅನುಕೂಲವಾಗಲಿದೆ. ಮಕ್ಕಳಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸ್ಕೇಟಿಂಗ್‌ನಲ್ಲಿ ಭಾಗವಹಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಶಾಸಕ ಕೆ.ಹರೀಶ್‌ಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ರೂಪಾ, ನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net