

ಅರಕಲಗೂಡು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅರಕಲಗೂಡು ವಿಧಾನಸಭಾ ಕ್ರೇತ್ರಕ್ಕೆ 3 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಶಾಸಕ ಎ.ಮಂಜು ಹೇಳಿದರು.
ಪಟ್ಟಣದಲ್ಲಿ ಇತ್ತೀಚೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ.ಪಂ. 13ನೇ ವಾರ್ಡ್ ಗೆ 50 ಲಕ್ಷ ರೂ., ಕೊಣನೂರಿಗೆ 80 ಲಕ್ಷ ರೂ., ಎಬಿಎಂ ಹಳ್ಳಿ 40 ಲಕ್ಷ ರೂ., ಸಿದ್ದಾಪುರ 50ಲಕ್ಷ ರೂ. ಹಾಗೂ ಹಳ್ಳಿ ಮೈಸೂರು ಹೋಬಳಿ ಮುಕ್ಕನಹಳ್ಳಿ 30ಲಕ್ಷ ರೂ., ಮಂಗಳವಾಡಿ ಗೆ 50 ಲಕ್ಷ ರೂ. ಅನುದಾನ ನೀಡಿದ್ದು, ಈ ಹಣದಲ್ಲಿ ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು. ಪಪಂ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಈ ಕುರಿತು ಗಮನಹರಿಸಬೇಕು ಎಂದು ತಿಳಿಸಿದರು.
ಪ.ಪಂ. ಅಧ್ಯಕ್ಷ ಪ್ರದೀಪ್‌ಕುಮಾರ್, ಉಪಾಧ್ಯಕ್ಷ ಸುಬಾನ್ ಷರೀಫ್, ಮಾಜಿ ಅಧ್ಯಕ್ಷ ಅಬ್ದುಲ್ ಬಾಸಿದ್, ಕೃಷ್ಣಯ್ಯ, ಹೂವಣ್ಣ ಇತರರಿದ್ದರು.