

ನೀರಿನಲ್ಲಿ ತೇಲುವ ಕೌಶಲ ಮೆರೆದ ನಗರದ ಭರವಸೆಯ ಈಜುಪಟು ಎಸ್.ತಾನ್ಯಾ ರಾಷ್ಟ್ರೀಯ ಜೂನಿಯರ್ ಮತ್ತು ಸಬ್ ಜೂನಿಯರ್ ಈಜು ಚಾಂಪಿಯನ್‌ಷಿಪ್‌ನಲ್ಲಿ ಎರಡು ಚಿನ್ನ ಸೇರಿದಂತೆ ಮೂರು ಪದಕ ಪಡೆದು ಗಮನ ಸೆಳೆದಿದ್ದಾರೆ.
ಇತ್ತೀಚೆಗೆ ಭುವನೇಶ್ವರದಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ 200 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಹಾಗೂ 400 ಮೀಟರ್ ವೈಯಕ್ತಿಕ ಮಿಡ್ಲೆ(ಐಎಂ)ನಲ್ಲಿ ಚಿನ್ನ ಹಾಗೂ 50 ಮೀಟರ್ ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಕಂಚಿನ ಪದಕ ಪಡೆದಿದ್ದಾರೆ. ತಾನ್ಯಾ ಜೆ.ಪಿ.ನಗರ ಈಜುಕೊಳದಲ್ಲಿ ಪಿ.ಪವನ್‌ಕುಮಾರ್ ಅವರ ಬಳಿ ಅಭ್ಯಾಸ ನಡೆಸುತ್ತಿದ್ದಾರೆ.