ಮೀನು ಕೃಷಿಗೆ 3 ಸಾವಿರ ಕೋಟಿ ರೂ. ಅನುದಾನ

meenu
Published on

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಮೀನು ಕೃಷಿಗೆ ಅನೇಕ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ದೇಶಾದ್ಯಂತ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು 20 ಸಾವಿರ ಕೋಟಿ ರೂ. ವಿನಿಯೋಗಿಸಲಾಗುತ್ತಿದ್ದು, ರಾಜ್ಯಕ್ಕೆ 3 ಸಾವಿರ ಕೋಟಿ ರೂ. ಅನುದಾನ ಲಭಿಸಲಿದೆ. ಮೀನುಗಾರರು ಇದರ ಪ್ರಯೋಜನ ಪಡೆದು ಸ್ವಾವಲಂಬಿಗಳಾಗಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಇಲ್ಲಿನ ಪುರಭವನದಲ್ಲಿ ಮಂಗಳವಾರ ಮೀನುಗಾರಿಕೆ ಇಲಾಖೆಯಿಂದ ಆಯೋಜಿಸಿದ ಪಂಜರ ಮೀನು ಕೃಷಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಲಾಖೆ ಕಾರ್ಯಕ್ರಮಗಳ ಕೈಪಿಡಿ ಬಿಡುಗಡೆ ಮಾಡಿದರು. ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ದಿನೇಶ್ ಕುಮಾರ್ ಎಚ್.ಕೆ ಪ್ರಾಸ್ತಾವಿಕ ಮಾತನಾಡಿದರು. ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸಂಧ್ಯಾ ಕಾಮತ್, ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಮೀನುಗಾರಿಕೆ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

ರಾಜ್ಯದಲ್ಲಿ 5.7 ಲಕ್ಷ ಹೆಕ್ಟೇರ್ ಜಲಾಶಯವಿದ್ದು, ಅದರಲ್ಲಿ ಶೇ.12ರಷ್ಟು ಮಾತ್ರ ಮೀನು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿ ಪೂರ್ತಿ ಪ್ರಮಾಣದ ಮೀನುಗಾರಿಕಾ ಚಟುವಟಿಕೆಗಳಿಗೆ ಬಳಸಿಕೊಂಡು ಮೀನುಗಾರಿಕೆಯಲ್ಲಿ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನ ಪಡೆಯಬೇಕು.ಆಲೂಗಡ್ಡೆ, ಬಾಳೆ ಚಿಪ್ಸ್‌ಗಳಂತೆ ಮೀನು ಚಿಪ್ಸ್‌ಗಳನ್ನು ಗುಣಮಟ್ಟದೊಂದಿಗೆ ದಿನಕ್ಕೆ ಎರಡು ಲಕ್ಷಕ್ಕೂ ಹೆಚ್ಚು ಪ್ಯಾಕ್ ಉತ್ಪಾದಿಸಿ ಮಾರುಕಟ್ಟೆಗೆ ಬಿಡಲಾಗುತ್ತದೆ. ಕೋಟ ಶ್ರೀನಿವಾಸ ಪೂಜಾರಿ ಮೀನುಗಾರಿಕೆ ಮತ್ತು ಬಂದರು ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net