3 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

18MDG3
Published on

ಮುಂಡರಗಿ: ತಾಲೂಕಿನ ಶಿಂಗಟಾಲೂರ ಗ್ರಾಮದ ತುಂಗಭದ್ರಾ ನದಿ ದಂಡೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಸಿಪಿಐ ಸುಧೀರಕುಮಾರ ಬೆಂಕಿ ನೇತೃತ್ವದ ತಂಡ ಸೋಮವಾರ ಸಂಜೆ ದಾಳಿ ನಡೆಸಿ ವಶಪಡಿಸಿಕೊಂಡಿದೆ.

ಅಂದಾಜು 3 ಲಕ್ಷ ರೂ.ಮೌಲ್ಯದ 110 ಕ್ಯೂಬಿಕ್ ಮೀಟರ್ ಮರಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಿದೆ. ಅಲ್ಲದೆ, ಫೆ. 13ರಂದು ಶಿಂಗಟಾಲೂರ ಭಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 4 ಲಕ್ಷ ರೂ.ವೆಚ್ಚದ 250 ಕ್ಯೂಬಿಕ್ ಮೀಟರ್ ಮರಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.

‘ಅಕ್ರಮವಾಗಿ ಮರಳು ಸಂಗ್ರಹಿಸುವ ಅಡ್ಡೆಗಳ ಮೇಲೆ ನಿಗಾ ವಹಿಸಲಾಗಿದೆ. ಅಕ್ರಮ ಮರಳು ಸಂಗ್ರಹಿಸದಂತೆ ಕ್ರಮ ಕೈಗೊಳ್ಳುತ್ತೇವೆ’ ಸಿಪಿಐ ತಿಳಿಸಿದರು. ಪೊಲೀಸ್ ಸಿಬ್ಬಂದಿ ಮಹೇಶ ಗೊಳಗೊಳಕೆ, ಮಂಜುನಾಥ ಮಾದರ, ಕೊಟ್ರೇಶ ಒಡೆಯರ, ಉಮೇಶ ಲಮಾಣಿ ಇತರರಿದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net