3 ಸಾವಿರ ಕೂಲಿಕಾರ್ಮಿಕರಿಗೆ ಊಟದ ವ್ಯವಸ್ಥೆ

18ank news and photos 02
Published on

ಆನೇಕಲ್: ತಾಲೂಕಿನ ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ನೆಲೆಸಿರುವ ಉತ್ತರ ಭಾರತದ ಮೂರು ಸಾವಿರ ಕೂಲಿಕಾರ್ಮಿಕರಿಗೆ ಕರವೇ ಕಾರ್ಮಿಕ ಘಟಕದ ಅಧ್ಯಕ್ಷ ಅಂಬರೀಷ್ ನೇತೃತ್ವದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು ಬಿಗ್‌ಬಾಸ್ ವಿಜೇತ ಶೈನ್‌ಶೆಟ್ಟಿ ಶನಿವಾರ ಊಟ ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ಕರೊನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎಲ್ಲರೂ ಸರ್ಕಾರದ ಆದೇಶ ಪಾಲಿಸಿ ಆರೋಗ್ಯವಂತರಾಗಿರಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕರವೇ ಕಾರ್ಮಿಕ ಘಟಕ ಅಧ್ಯಕ್ಷ ಅಂಬರೀಷ್ ಮಾತನಾಡಿ, ಹೆಬ್ಬಗೋಡಿ ಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹೊರ ರಾಜ್ಯದ ಕಾರ್ಮಿಕರಿದ್ದು, ಪ್ರತಿದಿನ ಅವರಿಗೆ ಊಟಕ್ಕೆ ತೊಂದರೆಯಾಗದಂತೆ ನಮ್ಮ ಯುವಕರಿಂದ ಊಟ ತಲುಪಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಸಮಾಜಸೇವಕ ಎಂ.ಸೋಮು, ಕರವೇ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ವೀಣಾ ರೆಡ್ಡಿ, ತಾಲೂಕು ಕಾರ್ಮಿಕ ಘಟಕ ಅಧ್ಯಕ್ಷ ಪುಟ್ಟೇಶ್, ಗ್ರಾಪಂ ಮಾಜಿ ಅಧ್ಯಕ್ಷೆ ಶಾಂತಾಮಣಿ, ಕರವೇ ತಾಲೂಕು ಕಾರ್ಯದರ್ಶಿ ದೇವಿಕಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net