

ಎನ್.ಆರ್.ಪುರ: ಪ್ರವಾಸೋದ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಪರಿಶ್ರಮದಿಂದ ಮಸೀದಿಗಳ ಅಭಿವೃದ್ಧಿಗೆ 30 ಲಕ್ಷ ರೂ. ಅನುದಾನ ಮಂಜೂರು ಆಗಿದೆ ಎಂದು ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್. ಶೆಟ್ಟಿ ತಿಳಿಸಿದ್ದಾರೆ.
ಎಂ.ಶ್ರೀನಿವಾಸ್ ತಾಲೂಕಿನ ಎಲ್ಲ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರ, ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಶ್ರಮಿಸಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಅವರನ್ನು ಭೇಟಿಯಾಗಿ ತಾಲೂಕಿನ ಮಸೀದಿಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಅದರಂತೆ ಸಚಿವ ಜಮೀರ್ ಅಹಮದ್ ಅವರು ಕಡಹಿನಬೈಲು ಗ್ರಾಪಂ ಶೆಟ್ಟಿಕೊಪ್ಪದ ಮೊಹಿದ್ದಿನ್ ಜುಮ್ಮಾ ಮಸೀದಿ ನವೀಕರಣಕ್ಕೆ 20 ಲಕ್ಷ ರೂ., ಪಟ್ಟಣದ ಪ್ರವಾಸಿ ಮಂದಿರ ಬಳಿ ಅಲ್ನೂರ್ ಮಸೀದಿ ಅಭಿವೃದ್ಧಿಗೆ 10 ಲಕ್ಷ ರೂ. ಮಂಜೂರು ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.