ಬಸ್ ಡಿಕ್ಕಿಯಾಗಿ 30 ಜನರಿಗೆ ಗಾಯ

25 TKE 6
Published on

ತರೀಕೆರೆ: ತಾಲೂಕಿನ ಕೆಂಚಿಕೊಪ್ಪ ಸಮೀಪದ ಸೇತುವೆಗೆ ಖಾಸಗಿ ಬಸ್ ಡಿಕ್ಕಿಯಾಗಿ ಬಸ್‌ನಲ್ಲಿ ದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಳಗ್ಗೆ 9 ಗಂಟೆಗೆ ಶಿವಮೊಗ್ಗದಿಂದ ತರೀಕೆರೆಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಕೆಂಚಿಕೊಪ್ಪ ಸಮೀಪದ ಸೇತುವೆ ಬಳಿ ಖಾಸಗಿ ಬಸ್ ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಓವರ್‌ಟೆಕ್ ಮಾಡುವ ಭರದಲ್ಲಿ ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಚ್ಚಿ ಬಿದ್ದ ಪ್ರಯಾಣಿಕರು ಬಸ್‌ನಲ್ಲಿ ನಿಯಂತ್ರಣ ತಪ್ಪಿ ಬಿದ್ದು ತಲೆ, ಕೈ ಕಾಲುಗಳಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಕವಳ್ಳಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net