ಉಡುಪಿಯಲ್ಲಿ ಕರೊನಾ ತ್ರಿಶತಕ

Covid 19 Birth
Published on

ಉಡುಪಿ: ಜಿಲ್ಲೆಯಲ್ಲಿ ಮೊದಲ ಬಾರಿಗೆ ಕರೊನಾ ಸೋಂಕು ಬಾಧಿತರ ಸಂಖ್ಯೆ ದಿನವೊಂದರಲ್ಲಿ ತ್ರಿಶತಕ ದಾಟಿದೆ. ಶನಿವಾರ 314 ಕರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಹಲವು ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದ ಐವರು ಹಿರಿಯ ನಾಗರಿಕರು ಮೃತಪಟ್ಟಿದ್ದಾರೆ.

ಉಡುಪಿ 192, ಕುಂದಾಪುರ 87, ಕಾರ್ಕಳದ 30 ಮಂದಿ, ಹೊರ ಜಿಲ್ಲೆಯ ಐವರು ಸೋಂಕು ಬಾಧಿತರು. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5919ಕ್ಕೆ, ಮೃತರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.

ಹೋಂ ಮತ್ತು ಆಸ್ಪತ್ರೆ ಐಸೊಲೇಶನ್‌ನಿಂದ 89 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 3347 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

ಕೋವಿಡ್-19 ರ‌್ಯಾಂಡಮ್ ಪರೀಕ್ಷೆ ವ್ಯವಸ್ಥೆ ಚುರುಕುಗೊಂಡಿದ್ದು ಶನಿವಾರ 2030 ಮಂದಿಯ ಗಂಟಲ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. 1379 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 1540 ಮಂದಿಯ ವರದಿ ಬರಲು ಬಾಕಿ ಇದೆ. 2512 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net