3.60 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶ

Akki
Published on

ಕುಂದಾಪುರ: ಬೈಂದೂರು ತಾಲೂಕು ಕಾಲ್ತೋಡು ಗ್ರಾಮ ಬೋಳಂಬಳ್ಳಿ ದೇವಸ್ಥಾನ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ಅಪಾರ ಪ್ರಮಾಣದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ನಿರೀಕ್ಷಕರು ಪೊಲೀಸ್ ಸಹಕಾರದಲ್ಲಿ ಮಂಗಳವಾರ ದಾಳಿ ನಡೆಸಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧಾರದಲ್ಲಿ ಕುಂದಾಪುರ ಆಹಾರ ನಿರೀಕ್ಷ ಸುರೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಒಟ್ಟು 3.60 ಲಕ್ಷ ರೂ. ಮೌಲ್ಯದ 300 ಚೀಲದಲ್ಲಿದ್ದ 150 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಬೈಂದೂರು ಆಹಾರ ನಿರೀಕ್ಷಕ ವಿನಯ ಕುಮಾರ್, ಸಿಬ್ಬಂದಿ ಪುನೀತ್, ವಿನುತಾ, ಬೈಂದೂರು ಠಾಣೆ ಮಹಾಬಲ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net