ಕಾಫಿ ಮಂಡಳಿಗೆ ೩೦೭.೮೦ ಕೋಟಿ ರೂ. ನೆರವು

23 ckm 7 dinesh devavrunda
ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಮಾತನಾಡಿದರು,
Published on

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ವಾಣಿಜ್ಯ ಸಚಿವಾಲಯವು ೨೦೨೪-೨೫ನೇ ಸಾಲಿನಲ್ಲಿ ಕಾಫಿ ಮಂಡಳಿಗೆ ೩೦೭.೮೦ ಕೋಟಿ ರೂ. ನೆರವು ನೀಡಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊತ್ತವು ೨೦೨೩-೨೪ನೇ ಸಾಲಿಗಿಂತ ಶೇ.೩೬ ರಷ್ಟು ಹೆಚ್ಚಾಗಿದೆ. ಇದೇ ವೇಳೆ ೨೦೨೩-೨೪ನೇ ಸಾಲಿನಲ್ಲಿ ಮಂಡಳಿಯ ವಿವಿಧ ಯೋಜನೆಯ ಸಹಾಯಧನಕ್ಕೆ ೬೨.೭೦ ಕೋಟಿ ರೂ. ಸಹಾಯಧನ ದೊರೆತಿದ್ದರೆ, ೨೦೨೪-೨೫ರಲ್ಲಿ ೯೦ ಕೋಟಿ ರೂ. ಸಹಾಯಧನ ಅನುದಾನ ದೊರೆತಿದೆ. ಇದು ಶೇ. ೪೦ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಈ ಅನುದಾನವನ್ನು ಕಾಫಿ ತೋಟದ ಅಭಿವೃದ್ಧಿ ಸೇರಿದಂತೆ ಉದ್ಯಮದ ವಿವಿಧ ಬೆಳವಣಿಗೆಗಳಿಗೆ ಬಳಸಿಕೊಳ್ಳಲಾಗುವುದು. ಇದಕ್ಕಾಗಿ ಬೆಳೆಗಾರರು ಹಾಗೂ ಕಾರ್ಮಿಕರಿಗೆ ನೆರವು ಕಲ್ಪಿಸಲಾಗುವುದು. ಕಾಫಿ ಕಣ ನಿರ್ಮಾಣ, ಗೋಡಾನ್, ಯಾಂತ್ರೀಕೃತ ಕಣ ನಿರ್ಮಾಣ, ಸೋಲಾರ್‌ನಿಂದ ಕಾಫಿ ಒಣಗಿಸುವ ಕಣ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ತೋಟಗಳಲ್ಲಿ ಕೆರೆ ನಿರ್ಮಾಣ, ತೆರೆದ ಬಾವಿ ನಿರ್ಮಾಣ, ಸ್ಪಿಂಕ್ಲರ್, ಹನಿ ನೀರಾವರಿ, ಪರಿಸರ ಸ್ನೇಹಿ ಪಲ್ಪರ್ ಯಂತ್ರಗಳು, ನೈಸರ್ಗಿಕ ತೋಟಗಾರಿಕೆ, ಡ್ರೋಣ್ ತಂತ್ರಜ್ಞಾನಗಳಿಗೆ ನೆರವು ನೀಡಲಾಗುವುದು. ಕಾಫಿ ಗಿಡಗಳ ಮರು ನಾಟಿ, ಹಾಲಿ ಇರುವ ಕಾಫಿ ಕ್ಯೂರಿಂಗ್‌ಗಳನ್ನು ಉನ್ನತ ದರ್ಜೆಗೇರಿಸುವುದು, ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸುವುದಕ್ಕೆ ಆರ್ಥಿಕ ನೆರವು ನೀಡುವುದು ಮತ್ತು ರೋಸ್ಟಿಂಗ್ ಮತ್ತು ಗ್ರೈಂಡಿAಗ್ ಘಟಕಗಳನ್ನು ಸ್ಥಾಪಿಸಲು ನೆರವು ನೀಡಲಾಗುವುದು ಎಂದು ವಿವರಿಸಿದರು.
ಇದೇ ವೇಳೆ ಸಬ್ಸಿಡಿ ಸೌಲಭ್ಯವನ್ನು ೧೦ ಹೆಕ್ಟರ್‌ನಿಂದ ೨೫ ಹೆಕ್ಟರ್‌ವರೆಗೆ ವಿಸ್ತರಿಸಲಾಗಿದೆ. ಇದರಿಂದ ಹೆಚ್ಚಿನ ಬೆಳೆಗಾರರಿಗೆ ಅನುಕೂಲವಾಗಲಿದೆ. ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ವಿದ್ಯಾನಿಧಿಗೆ ೪ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.
ಇತ್ತೀಚೆಗೆ ನಡೆದ ಕಾಫಿ ಬೆಳೆಯುವ ಸಮುದಾಯದ ಸಭೆಯಲ್ಲಿ ಕಾಫಿ ಮಂಡಳಿ ಸದಸ್ಯರು ಹಾಗೂ ಬೆಳೆಗಾರರನ್ನೊಳಗೊಂಡ ವಿವಿಧ ೧೭ ಸಮಿತಿಗಳನ್ನು ಕಾಫಿ ಬೆಳೆಯುವ ಜಿಲ್ಲೆಗಳಲ್ಲಿ ರಚಿಸಲು ತೀರ್ಮಾನಿಸಲಾಗಿದೆ. ಈ ಸಮಿತಿಗಳು ಕಾಫಿ ಉದ್ಯಮಕ್ಕೆ ಸಂಬAಧಿಸಿದ ಬೇರೆ ಬೇರೆ ವಿಚಾರಗಳ ಬಗ್ಗೆ ಚರ್ಚಿಸಿ ಮಂಡಳಿಗೆ ಶಿಫಾರಸು ಮಾಡಲಿದ್ದಾರೆ. ಅದನ್ನು ಅನುಷ್ಠಾನಕ್ಕೆ ತರುವ ಬಗ್ಗೆ ನಂತರ ತೀರ್ಮಾನಿಸಲಾಗುವುದು ಎಂದು ಹೇಳಿದರು.
ಈ ಬಾರಿ ಅತೀವೃಷ್ಠಿಯಿಂದಾಗಿ ಒಟ್ಟಾರೆ ಸರಾಸರಿ ಶೇ.೧೦ ರಿಂದ ೧೫ ರಷ್ಟು ಕಾಫಿ ಫಸಲು ಹಾನಿಗೀಡಾಗಿದೆ. ಕೆಲವು ಪ್ರದೇಶದಲ್ಲಿ ಶೇ. ೧೫ಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಕಾಫಿ ಮಂಡಳಿ ಮತ್ತು ಕಂದಾಯ ಇಲಾಖೆ ನೇತೃತ್ವದಲ್ಲಿ ಹಾನಿ ಬಗ್ಗೆ ಜಂಟೀ ಸರ್ವೇ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಆಂತರಿಕ ಕಾಫಿ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸುವ ಸಂಬAಧ ಯುವಕರಿಗೆ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ. ಮಹಿಳಾ ಸಂಘಗಳನ್ನು ಇದಕ್ಕೆ ಜೋಡಿಸಿಕೊಳ್ಳುವ ಆಲೋಚನೆ ಇದೆ ಎಂದು ಹೇಳಿದರು.
ಕಾಫಿಯನ್ನು ಫಸಲ್ ಭೀಮಾ ವಿಮಾ ಯೋಜನೆಗೆ ಸೇರ್ಪಡೆಗೊಳಿಸಬೇಕು ಎನ್ನುವ ಒತ್ತಾಯಗಳಿದ್ದ ಹಿನ್ನೆಲೆಯಲ್ಲಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಸಂಬAಧ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸರ್ಕಾರ ಕೋರಿದೆ. ಈ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.
ಕಾಫಿ ತೋಟಗಳನ್ನು ತುಂಡು ಭೂಮಿಯಾಗಿ ಪರಿವರ್ತಿಸಿ ಹೋಂಸ್ಟೇ ಇನ್ನಿತರೆ ಚಟುವಟಿಕೆ ಆರಂಭಿಸುವುದು ಸರಿಯಲ್ಲ. ಸರ್ಕಾರ ಎಷ್ಟು ಪ್ರಮಾಣದ ಜಾಗವನ್ನು ಪರಿವರ್ತಿಸುವುದು ಸೂಕ್ತ ಎನ್ನುವ ಮಾಹಿತಿ ಕೇಳಿದೆ. ಈ ಬಗ್ಗೆ ಸಮಾಲೋಚನೆ ನಡೆಸಿ ವರದಿ ನೀಡಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಫಿಮಂಡಳಿ ನಿರ್ದೇಶಕರಾದ ಮಹಾಬಲ, ಪ್ರದೀಪ್ ಪೈ, ಭಾಸ್ಕರ್, ಡಿ.ಎಂ.ಶAಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net