ರಾಮದುರ್ಗ ತಾಲೂಕು ಅಭಿವೃದ್ಧಿಗೆ 3100 ಕೋಟಿ ರೂ.ಅನುದಾನ

IMG-20230315-WA0045.jpg
Published on

ಬೆಳಗಾವಿ (ರಾಮದುರ್ಗ): ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಮದುರ್ಗ ತಾಲ್ಲೂಕಿಗೆ ಒಟ್ಟಾರೆ 3100 ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಎಂದು ರಾಮದುರ್ಗ ಶಾಸಕರಾದ ಮಹಾದೇವಪ್ಪ ಯಾದವಾಡ ಹೇಳಿದರು.

ರಾಮದುರ್ಗ ತಾಲ್ಲೂಕಿನ ಬಟಕುರ್ಕಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ  ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಹಕ್ಕುಪತ್ರ ವಿತರಣಾ ಸಮಾವೇಶ, ಅನುಷ್ಠಾನ ಹಾಗೂ ಅರಿವು ಕಾರ್ಯಕ್ರಮದಲ್ಲಿ ವಿವಿಧ ತಾಂಡಗಳ ನಿವಾಸಿಗಳಿಗೆ ಜಿಲ್ಲೆಯ ಒಟ್ಟು 11,600 ಜನರ ಪೈಕಿ  ಕೆಲ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಹಕ್ಕುಪತ್ರ ವಿತರಣೆ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು.‌
ರಾಮದುರ್ಗ ತಾಲೂಕಿನ ಐದು ಗ್ರಾಮಗಳು ಸೇರಿದಂತೆ ಜಿಲ್ಲೆಯ 75 ಗ್ರಾಮಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಿರುವುದಕ್ಕೆ ಶಾಸಕ ಮಹಾದೇವಪ್ಪ ಯಾದವಾಡ ಅವರು ಸಂತಸ ವ್ಯಕ್ತಪಡಿಸಿದರಲ್ಲದೇ, ತಾಲೂಕಿನ ಇನ್ನುಳಿದ ತಾಂಡ ಹಾಗೂ ಕೆಲ ಗ್ರಾಮಗಳನ್ನು ಕಂದಾಯ ಗ್ರಾಮವೆಂದು ಘೋಷಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುತುವರ್ಜಿಯಿಂದ ಹತ್ತಾರು ಕಾನೂನು ತೊಡಕುಗಳನ್ನು ಬಗೆಹರಿಸಿದ ಪರಿಣಾಮ ಇಂದು ಸಾವಿರಾರು ಕುಟುಂಬಗಳಿಗೆ ಹಕ್ಕುಪತ್ರ ದೊರೆತಿದೆ. ಇದರಲ್ಲಿ ಕಂದಾಯ ಸಚಿವರಾದ ಆರ್.ಅಶೋಕ ಅವರ ಶ್ರಮ ಕೂಡ ಬಹಳಷ್ಟಿದೆ ಎಂದರು.‌
ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ದುಯೋಧನ ಐಹೊಳೆ, ಗ್ರಾಪಂ ಅಧ್ಯಕ್ಷ ವೀಣಾ ಬೈಲಗಾಣದ, ಎಂ.ಜಿ.ಹಿರೇಮಠ, ಹರ್ಷಲ್ ಭೋಯರ್, ಡಾ.ಸಂಜೀವ ಪಾಟೀಲ ಇದ್ದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net