ದ.ಕ ಜಿಲ್ಲೆಯಲ್ಲಿ 311 ಕರೊನಾ ಪ್ರಕರಣ

corona
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 311 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಂದೇ ದಿನ ಇಷ್ಟು ಕರೊನಾ ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲಾಗಿದೆ. ಜತೆಗೆ 8 ಮಂದಿ ಕರೊನಾ ಸೋಂಕಿಗೆ ಬಲಿಯಾಗಿದ್ದು, ಈ ಎಲ್ಲರೂ 50 ವರ್ಷ ಮೇಲ್ಪಟ್ಟವರು. ಕರೊನಾ ಜತಗೆ ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತಿದ್ದವರು. 115 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಮೃತಪಟ್ಟವರ ಕಾರಣ (ಕಾಸ್ ಆಫ್ ಡೆತ್) ತಿಳಿಯಲು ಜಿಲ್ಲಾಮಟ್ಟದ ತಜ್ಞರ ಸಮಿತಿಯ ವರದಿಯ ನಿರೀಕ್ಷೆಯಲ್ಲಿದ್ದೇವೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ಉಡುಪಿಯಲ್ಲಿ 84 ಹೊಸ ಪ್ರಕರಣಗಳು ಪತ್ತೆಯಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net