

ಚಿತ್ರದುರ್ಗ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ,ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿ ಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ಮೇ 31ರಂದು ಬೆಳಗ್ಗೆ 9.30ಕ್ಕೆ ನಗರದ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ಏರ್ಪಡಿಸಲಾಗಿದೆ. ಹಮ್ಮಿಕೊಳ್ಳಲಾಗಿದೆ. 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಉಜ್ವಲಾವೀರಣ್ಣ ಸಿದ್ದಣ್ಣವರ್ ಕಾರ್ಯಕ್ರಮ ಉದ್ಘಾಟಿಸುವರು. ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲ ಡಾ.ಎಂ.ಎಸ್.ಪ್ರಶಾಂತ್ ಅಧ್ಯಕ್ಷತೆ ವಹಿಸುವರು. ಡಿಸಿ ಟಿ.ವೆಂಕಟೇಶ್ ಉಪಸ್ಥಿತರಿರುವರು. ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ,ಉಪಾಧ್ಯಕ್ಷ ಬಿ.ಎಂ.ಅನಿಲ್‌ಕುಮಾರ್,ಕಾರ್ಯದರ್ಶಿ ಆರ್.ಗಂಗಾಧರ್,ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್,ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ ಭಾ ಗ ವಹಿಸುವರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ ಉಪನ್ಯಾಸ ನೀಡುವರೆಂದು ಪ್ರಕಟಣೆ ತಿಳಿಸಿದೆ.