31ರಂದು ನಾರಾಯಣಗುರು ಜಯಂತಿ

ADC jayanthi meeting (3)
Published on

ಮೈಸೂರು: ಬ್ರಹ್ಮಶ್ರೀ ನಾರಾಯಣಗುರು ಹಾಗೂ ನುಲಿಯ ಚಂದಯ್ಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್ ತಿಳಿಸಿದರು.


ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ವತಿಯಿಂದ ಆ.31ರಂದು ಮಧ್ಯಾಹ್ನ 3ಕ್ಕೆ ನಗರದ ಕಲಾಮಂದಿರದಲ್ಲಿ ನಾರಾಯಣಗುರು ಜಯಂತಿಯನ್ನು ಆಚರಿಸಲಾಗುವುದು. ನುಲಿಯ ಚಂದಯ್ಯ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಸಮುದಾಯದ ಮುಖಂಡರು ಸಮಾಯಾವಕಾಶ ಕೇಳಿರುವುದರಿಂದ ಮುಂದೆ ದಿನಾಂಕ ಸೂಚಿಸಲಾಗುವುದು ಎಂದು ತಿಳಿಸಿದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಮಾತನಾಡಿ, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಳಿದ ಅಂಶಗಳನ್ನು ಜಿಲ್ಲಾ ಶಿಷ್ಟಾಚಾರದಂತೆ ನಡೆಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net