32.90 ಲಕ್ಷ ರೂ. ತೆಗೆದುಕೊಂಡು ಪರಾರಿ

crime
Published on

ಹುಬ್ಬಳ್ಳಿ: ಇಲ್ಲಿಯ ಸ್ಮಾಲ್ ಫೈನಾನ್ಸ್‌ವೊಂದರ ಸಹಾಯಕ ವ್ಯವಸ್ಥಾಪಕ ಹಾಗೂ ಶಾಖಾ ವ್ಯವಸ್ಥಾಪಕ ಸೇರಿ 32.90 ಲಕ್ಷ ರೂ. ತೆಗೆದುಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಅರುಣಕುಮಾರ, ಪ್ರಶಾಂತನ ವಿರುದ್ಧ ಬ್ಯಾಂಕ್ ನೌಕರ ಮಂಜುನಾಥ ಎಂಬುವರು ದೂರು ದಾಖಲಿಸಿದ್ದಾರೆ.
39.37 ಲಕ್ಷ ರೂ.ಲ್ಲಿ 25 ಲಕ್ಷ ರೂ. ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ಜಮಾ ಮಾಡುವಂತೆ ಬ್ಯಾಂಕ್ ಸೂಚಿಸಿತ್ತು. ಅದರಲ್ಲಿ ಕೇವಲ ಐದು ಲಕ್ಷ ರೂ. ಜಮಾ ಮಾಡಿ, ಉಳಿದ ಹಣ ತೆಗೆದುಕೊಂಡು ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net