328 ರೈತರ ಅರ್ಜಿ ತಿರಸ್ಕೃತ

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಮೋಹನ್ ಕುಮಾರ್
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಮೋಹನ್ ಕುಮಾರ್
Published on

ಚನ್ನರಾಯಪಟ್ಟಣ: ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದ 328 ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, ಅಂತಹ ಜಮೀನುಗಳ ರೈತರು ಅಗತ್ಯ ದಾಖಲಾತಿಗಳೊಂದಿಗೆ ಆಕ್ಷೇಪಣೆ ಅರ್ಜಿ ಸಲ್ಲಿಸಬೇಕು ಎಂದು ಕೃಷಿ ಸಹಾಯಕ ನಿರ್ದೇಶಕ ಕೆ.ಮೋಹನ್‌ಕುಮಾರ್‌ ತಿಳಿಸಿದ್ದಾರೆ.

ಪಟ್ಟಣದ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಣಿಯಾದವರನ್ನು ಹೋಲಿಕೆ ಮಾಡಿದಾಗ ತಾಳೆಯಾಗಿಲ್ಲ. ಹೀಗಾಗಿ 328 ಅರ್ಜಿಗಳು ತಿರಸ್ಕೃತಗೊಂಡಿದ್ದು, ಪ್ರಸ್ತಾವನೆಗಳನ್ನು ಈಗಾಗಲೇ ತಾಲೂಕಿನ ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರದ ನಾಮಫಲಕಗಳಲ್ಲಿ ಪ್ರಕಟಿಸಲಾಗಿದೆ.

ಪಟ್ಟಿಯಲ್ಲಿರುವ ರೈತರು ಆಕ್ಷೇಪಣೆಗಳಿದ್ದಲ್ಲಿ ಪಹಣಿ, ಬೆಂಬಲ ಬೆಲೆ ಯೋಜನೆಯಡಿ ಪ್ರಯೋಜನ ಪಡೆದಿದ್ದಲ್ಲಿ ರಸೀದಿ ಹಾಗೂ ವಿಮೆಗೆ ನೋಂದಣಿಗೊಂಡ ಬೆಳೆಯ ಉತ್ಪನ್ನವನ್ನು ಆಯಾ ಮಾರುಕಟ್ಟೆಗೆ ಮಾರಾಟ ಮಾಡಿದಲ್ಲಿ ಸದರಿ ದಾಖಲೆಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇಗೆ ಮಾ.4 ರೊಳಗೆ ಸಲ್ಲಿಸಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net