ಮಹಿಳೆಯರಿಗೆ ಶಕ್ತಿ ತುಂಬುವ ನಿರ್ಧಾರ : ಸಂತೋಷ ಹಾದಿಮನಿ ಸ್ವಾಗತ

ಸಂಸತ್ತಿನ ನೂತನ  ಕಟ್ಟಡದಲ್ಲಿ ಜರುಗಿದ ಮೊದಲ ಅಧಿವೇಶನದಲ್ಲಿಯೇ ಮಂಡನೆ ಮಾಡುವ ಮೂಲಕ ಕೇಂದ್ರ ಸರ್ಕಾರ ಮಹಿಳಾ ಪರ ಬದ್ಧತೆ ಮೆರೆದಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ
IMG-20230919-WA0013
Published on

ವಿಜಯವಾಣಿ ಸುದ್ದಿಜಾಲ ಕಲಬುರಗಿ


ಸಂಸತ್ತಿನಲ್ಲಿ ನಾರಿ ಶಕ್ತಿ ವಂದನ ಮಸೂದೆ ಮಂಡಿಸುವ ಮೂಲಕ ಕೇಂದ್ರ ಸರ್ಕಾರ ಐತಿಹಾಸಿಕ ಹೆಜ್ಜೆ ಇರಿಸಿದೆ.  ಮಹಿಳೆಯರಿಗೆ ಶೇ.೩೩ ರಷ್ಟು ಮೀಸಲಾತಿ ಲೋಕಸಭೆ ಹಾಗೂ ವಿಧಾನ ಸಭೆ ಚುನಾವಣೆಯಲ್ಲಿ ಕಲ್ಪಿಸುವುದು ಐತಿಹಾಸಿಕ ನಿರ್ಧಾರ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು  ಹೇಳಿದಂತೆ ನಡೆದುಕೊಳ್ಳುವ ಮೂಲಕ ಮಹಿಳೆಯರಿಗೆ ಶಕ್ತಿ ತುಂಬಲು ಮುಂದಾಗಿದ್ದಾರೆ. ಎಂದು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ ಸಂತೋಷ ಹಾದಿಮನಿ   ಪ್ರಧಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹೆಂಗರುಳಿನ ಶ್ರೇಷ್ಠ ವ್ಯಕ್ತಿ. ಮಹಿಳೆಯರ ಮೇಲಿರುವ ಗೌರವ, ಪ್ರೀತಿಯಿಂದಲೇ ಶೇ.೩೩ ಮೀಸಲು ನೀಡಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಹಲವಾರು ದಶಕಗಳಿಂದ ಆಗದಿರುವ ಐತಿಹಾಸಿಕ ಕೆಲಸ ಮಾಡಿದ್ದಾರೆ. ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸಂಸತ್ತಿನ ನೂತನ  ಕಟ್ಟಡದಲ್ಲಿ ಜರುಗಿದ ಮೊದಲ ಅಧಿವೇಶನದಲ್ಲಿಯೇ ಮಂಡನೆ ಮಾಡುವ ಮೂಲಕ ಕೇಂದ್ರ ಸರ್ಕಾರ ಮಹಿಳಾ ಪರ ಬದ್ಧತೆ ಮೆರೆದಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಮಹತ್ವದ ಬದಲಾವಣೆಗೆ ಈ ಮೀಸಲು ಮಸೂದೆ ನಾಂದಿ ಹಾಡಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net