334 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ

06 ಗುರುಗುಂಟಾ ಫೋಟ 01
Published on


ಗುರುಗುಂಟಾ: ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟಿದ್ದರಿಂದ ನದಿ ತೀರದ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ.

ಕೃಷಿ ಇಲಾಖೆ ಅಂದಾಜಿನಂತೆ ನದಿ ತಟದಲ್ಲಿನ ಕಡದರಗಡ್ಡಿ, ಹಂಚಿನಾಳ, ಶೀಲಹಳ್ಳಿ, ರಾಯದುರ್ಗ, ಟಣಮನಕಲ್, ಗದ್ದಿಗಿ, ಗದ್ದಿಗಿ ತಾಂಡಾದ ಸುಮಾರು 334 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೊಗರಿ, ಸಜ್ಜೆ, ಹತ್ತಿ, ಸೂರ್ಯಕಾಂತಿ, ಎಳ್ಳು, ಹೆಸರು ನೀರಿನಲ್ಲಿ ಮುಳುಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಮೀನಿನಲ್ಲಿ ನೀರು ನಿಂತಿರುವುದರಿಂದ ನಷ್ಟದ ನಿಖರ ಮಾಹಿತಿ ತಿಳಿದಿಲ್ಲ. ಕೃಷಿ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಬೆಳೆ ಹಾನಿ ಸಮೀಕ್ಷೆ ಪರಿಹಾರ ನೀಡಬೇಕೆಂಬುದು ರೈತರ ಒತ್ತಾಯವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net