3454 ಜನರಿಗೆ ಕರೊನಾ ಲಸಿಕೆ

26 YLP 01
Published on

ಯಲ್ಲಾಪುರ: ಇಲ್ಲಿನ ತಾ.ಪಂ ಸಭಾಭವನದಲ್ಲಿ ಸಾಮಾನ್ಯ ಸಭೆ ಅಧ್ಯಕ್ಷೆ ಚಂದ್ರಕಲಾ ಭಟ್ಟ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಆಯೋಜಿತವಾಗಿತ್ತು.

ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ. ಭಟ್ಟ ಮಾತನಾಡಿ, ತಾಲೂಕಿನಲ್ಲಿ ಈವರೆಗೆ 3454 ಜನರಿಗೆ ಕರೊನಾ ಲಸಿಕೆ ನೀಡಲಾಗಿದ್ದು, ಲಸಿಕೆ ನೀಡಿಕೆಯಲ್ಲಿ ತಾಲೂಕು ಜಿಲ್ಲೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಎರಡನೇ ಅಲೆಯ ಪರಿಣಾಮ ಸ್ಥಳೀಯವಾಗಿಯೂ ಆರಂಭವಾಗಿದ್ದು, ಜನತೆ ನಿರ್ಲಕ್ಷ್ಯ ತಾಳಿದರೆ ಇನ್ನಷ್ಟು ಗಂಭೀರ ಪರಿಣಾಮಗಳು ಉಂಟಾಗುವುದು ನಿಶ್ಚಿತ ಎಂದರು.

ಪಶುಸಂಗೋಪನಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದ್ದು, ಸಮರ್ಪಕ ಕಾರ್ಯನಿರ್ವಹಣೆಗೆ ತೊಂದರೆ ಉಂಟಾಗುತ್ತಿದೆ. ಸಿಬ್ಬಂದಿ ಕೊರತೆ ನೀಗಿಸುವ ಬಗೆಗೆ ಗಮನ ಹರಿಸುವಂತೆ ಪಶುವೈದ್ಯ ಡಾ. ಸುಬ್ರಾಯ ಭಟ್ಟ ತಿಳಿಸಿದರು.

ಇಡಗುಂದಿ ಬಳಿ ಕೃಷಿ ಕಾರ್ಯದ ವೇಳೆ ಮೃತಪಟ್ಟ 4 ಕಾರ್ವಿುಕರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲು ಸರ್ಕಾರಕ್ಕೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ನಾಗರಾಜ ನಾಯ್ಕ ಮಾಹಿತಿ ನೀಡಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆಯ ಪ್ರಗತಿಯ ಮಾಹಿತಿ ನೀಡಿದರು. ತಾಪಂ ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ತಿನೆಕರ್, ಇಒ ಜಗದೀಶ ಕಮ್ಮಾರ ಹಾಗೂ ಸದಸ್ಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net