ಸಿದ್ಧಾರೂಢ ಮಠದಲ್ಲಿ 35.13 ಲಕ್ಷ ರೂ. ಕಾಣಿಕೆ ಸಂಗ್ರಹ

siddarudha swamiji math
Published on

ಹುಬ್ಬಳ್ಳಿ: ಇಲ್ಲಿಯ ಶ್ರೀ ಸಿದ್ಧಾರೂಢ ಸ್ವಾಮಿಗಳ ಮಠದ ಕಾಣಿಗೆ ಪೆಟ್ಟಿಯಲ್ಲಿ 34 ದಿನದಲ್ಲಿ 35,13,593 ರೂ. ಕಾಣಿಕೆ ಸಂಗ್ರಹವಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ಸಿಬ್ಬಂದಿ ಹಾಗೂ ಭಕ್ತರ ಸಮ್ಮುಖದಲ್ಲಿ ಇತ್ತೀಚೆಗೆ ಕಾಣಿಗೆ ಪೆಟ್ಟಿಗೆಯಲ್ಲಿ ಸಂಗ್ರಹವಾಗಿದ್ದ ಕಾಣಿಕೆಯನ್ನು ಎಣಿಕೆ ಮಾಡಲಾಯಿತು. 35,13,593 ರೂ. ಕಾಣಿಕೆ, 25,241 ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಸಾಮಗ್ರಿಗಳು ಸಂಗ್ರಹವಾಗಿವೆ. ಏ. 16ರಿಂದ ಮೇ 21ರವರೆಗೆ ಈ ಹಣ ಸಂಗ್ರಹವಾಗಿತ್ತು.

ಶ್ರೀಮಠದ ಟ್ರಸ್ಟ್ ಕಮಿಟಿ ಚೇರ್ಮನ್ ಚನ್ನವೀರ ಮುಂಗುರವಾಡಿ, ವೈಸ್ ಚೇರ್ಮನ್ ವಿನಾಯಕ ಘೋಡಕೆ, ಧರ್ಮದರ್ಶಿಗಳಾದ ವಸಂತ ಸಾಲಗಟ್ಟಿ, ಗೀತಾ ಕಲಬುರ್ಗಿ, ಬಸವರಾಜ ಕಲ್ಯಾಣಶೆಟ್ಟರ, ಶಾಲಿನಿ ಜಾಧವ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net