ಬಿಳಿಗಿರಿರಂಗನಾಥಸ್ವಾಮಿ ದೇಗುಲದಲ್ಲಿ 35.79 ಲಕ್ಷ ರೂ. ಸಂಗ್ರಹ

Oplus_0
ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಶ್ರೀ ಬಿಳಿಗಿರಿರಂಗನಾಥಸ್ವಾಮಿ ದೇಗುಲದಲ್ಲಿ ಬುಧವಾರ ಸಿಬ್ಬಂದಿ ಹುಂಡಿ ಹಣ ಎಣಿಕೆ ಮಾಡುತ್ತಿರುವುದು.
Published on

ಯಳಂದೂರು: ತಾಲೂಕಿನ ಪುರಾಣ ಪ್ರಸಿದ್ಧ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ ದೇಗುಲದಲ್ಲಿ ಮೂರು ತಿಂಗಳ ಅವಧಿಯಲ್ಲಿ 35,79,180 ರೂ. ಸಂಗ್ರಹವಾಗಿದೆ ಎಂದು ದೇಗುಲದ ಕಾರ್ಯ ನಿರ್ವಾಹಕಾಧಿಕಾರಿ ಮೋಹನ್‌ಕುಮಾರ್ ಮಾಹಿತಿ ನೀಡಿದರು.

ಅಲಮೇಲಮ್ಮ ದೇಗುಲ ಮುಂಭಾಗ ಬುಧವಾರ ಹುಂಡಿ ಜಣ ಎಣಿಕೆ ಕಾರ್ಯಕ್ಕೆ ಚಾಲನೆ ದೊರೆಯಿತು. ದೇಗುಲದ ಸಿಬ್ಬಂದಿ, ಕಂದಾಯ ಇಲಾಖೆಯ ಸಿಬ್ಬಂದಿ, ಬ್ಯಾಂಕ್‌ನ ನೌಕರರು ಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಬಿಗಿ ಬಂದೋ ಬಸ್ತ್ ಮಾಡಲಾಗಿತ್ತು.

ತಹಸೀಲ್ದಾರ್ ಜಯಪ್ರಕಾಶ್, ಗ್ರೇಡ್ 2 ತಹಸೀಲ್ದಾರ್ ಶಿವರಾಜು, ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ವೀರಭದ್ರಸ್ವಾಮಿ, ಪಾರುಪತ್ತೇದಾರ ರಾಜು, ಸಿಬ್ಬಂದಿ ಶೇಷಾದ್ರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net