

ಹಲಗೂರು: ಇಲ್ಲಿನಪ್ರವಾಸಿ ತಾಣ ಮುತ್ತತ್ತಿಗೆ ತೆರಳುವ ಮಾರ್ಗ ಮಧ್ಯೆ ಕೆಸರಕ್ಕಿಹಳ್ಳದ ತಿರುವಿನಲ್ಲಿ ಶನಿವಾರ ಸಂಜೆ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯ ಬಸ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ 35ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಹಾಗೂ ಮಳವಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.