

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ೩೭೧ (ಜೆ) ಅಡಿ ಉದ್ಯೋಗ ನೇಮಕ ಹಾಗೂ ಬಡ್ತಿ ಬಗ್ಗೆ ಆಗಿರುವ ಗೊಂದಲ ನಿವಾರಿಸಿ ಸೂಕ್ತ ಮಾರ್ಗಸೂಚಿ ಸಿದ್ಧಪಡಿಸುವಂತೆ ೩೭೧ ಜೆ ಸಂಪುಟ ಉಪ ಸಮಿತಿ ಅಧ್ಯP್ಷÀ, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿP್ಷÀಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸೂಚಿಸಿದರು.
ವಿಕಾಸಸೌಧದಲ್ಲಿ ಬುಧವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ, ಸೂಚನೆ ನೀಡಿದರು.
ಉದ್ಯೋಗ ನೇಮಕಕ್ಕೆ ಸಂಬAಧಿಸಿದAತೆ ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟಣೆ ವಿಷಯದಲ್ಲಿ ಪದೇ ಪದೆ ಗೊಂದಲ ಸೃಷ್ಟಿಯಾಗುತ್ತಿದ್ದು, ಸೂಕ್ತ ಮಾರ್ಗಸೂಚಿ ಸಿದ್ಧಪಡಿಸಿ, ಅಂತಿಮವಾಗಿ ಸಚಿವ ಸಂಪುಟ ಉಪ ಸಮಿತಿ ಮುಂದಿನ ಸಭೆಯಲ್ಲಿ ಚರ್ಚೆಗೆ ಸಲ್ಲಿಸಬೇಕು ಎಂದು ಸೂಚಿಸಿದರು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಡಿ.ರಣದೀಪ, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ಕೆ.ರಾಕೇಶಕುಮಾರ, ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಇದ್ದರು.