ನೌಕರರ ಸಂಬಳ ಶೇ.38 ಹೆಚ್ಚಳ ಸಾಧ್ಯತೆ

SHADAKSHARI cs (2)
Published on

ಹೊಸದುರ್ಗ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಪ್ಪಾರಸ್ಸಿನಂತೆ ಶೇ.38ರಿಂದ 40ರಷ್ಟು ವೇತನ ಹೆಚ್ಚಾಗುವ ವಿಶ್ವಾಸವಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.

ಸರ್ಕಾರಿ ನೌಕರರ ಸಂಘ ಸುವರ್ಣ ಮಹೋತ್ಸವದ ಆಂಗವಾಗಿ ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಸಭಾಭವನದ ಶಂಕುಸ್ಥಾಪನೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ರಚಿಸಿರುವ 7ನೇ ವೇತನ ಆಯೋಗದ ಸಮಿತಿಯು ನವಂಬರ್ ಅಂತ್ಯದ ವೇಳೆಗೆ ವೇತನ ಹೆಚ್ಚಳಕ್ಕೆ ಪೂರಕವಾಗಿರುವ ವರದಿಯನ್ನು ಸಲ್ಲಿಸಲಿದೆ. ಶುಕ್ರವಾರ ಸಮಿತಿಯ ಸದಸ್ಯರನ್ನು ಭೇಟಿ ಮಾಡಿ ಶೇ.38 ರಿಂದ 40ರಷ್ಟು ವೇತನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ. ಏಪ್ರಿಲ್ 1ರಂದು ನಡೆಸಿದ ಒಂದು ದಿನದ ಮುಷ್ಕರದ ಫಲವಾಗಿ ಮಧ್ಯಂತರ ಪರಿಹಾರ ಸಿಕ್ಕಿದೆ. 7ನೇ ವೇತನ ಆಯೋಗದ ವರದಿ ಜಾರಿ ಹಾಗೂ ಒಪಿಎಸ್ ಮರು ಜಾರಿ ನಮ್ಮ ಪ್ರಮುಖ ಬೇಡಿಕೆಗಳಾಗಿವೆ ಎಂದರು.

ರಾಜ್ಯ ಸರ್ಕಾರಿ ನೌಕರರ ಕುಟುಂಬಗಳಿಗೆ ಆಸ್ಪತ್ರೆಯಲ್ಲಿ ಕ್ಯಾಶ್ ಲೆಸ್ ಚಿಕಿತ್ಸೆ ಸಿಗುವ ಯೋಜನೆ ಈ ತಿಂಗಳ ಅಂತ್ಯದೊಳಗೆ ಜಾರಿಯಾಗಲಿದೆ. ರಾಜ್ಯದ 22 ಲಕ್ಷ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆಯಲಿವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net