38 ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ

38 ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ
Published on

ಹಾಸನ: ತಾಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಜಾಗೃತಿ ಅಭಿಯಾನ ರಥವು ತಾಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿ ಜನವರಿ 26 ರಿಂದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಚರಿಸಿ ಭಾರತ ಸಂವಿಧಾನ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.
ಸಂವಿಧಾನ ಜಾಗೃತಿ ಅಭಿಯಾನ ರಥವು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಸಂಧರ್ಭದಲ್ಲಿ ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ತುಂಬಾ ಸಂತೋಷವಾಗಿ ಸ್ವಾಗತಿಸಿದರು.
ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಥಳೀಯವಾಗಿ ವೇದಿಕೆ ಕಾರ್ಯಕ್ರಮ ಆಯೋಜಿಸಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವಿಟ್ಟು ಜನ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳನ್ನು ಸೇರಿಸಿ ಸಂವಿಧಾನ ಮಾಹಿತಿಯುಳ್ಳ ಕರಪತ್ರ ಹಂಚುವ ಮೂಲಕ ಸಂವಿಧಾನ ಆಶಯಗಳನ್ನೂ ಪಾಲಿಸುವಂತೆ ಪ್ರತಿಜ್ಞಾವಿಧಿ ಭೋದಿಸಲಾಯಿತು.
ಒಟ್ಟಾರೆ ಸಂವಿಧಾನ ಜಾಗೃತಿ ಅಭಿಯಾನ ರಥವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ಸಾರ್ವಜನಿಕರುಗಳಿಗೆ ಸಂವಿಧಾನ ಆಶಯ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಅರಿವು ಮೂಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net