ಕೃಷಿ ವಿಶ್ವವಿದ್ಯಾಲಯದ 39ನೇ ಸಂಸ್ಥಾಪನಾ ದಿನಾಚರಣೆ

11 Dwd 5 Agri university
Published on

ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದ 39ನೇ ಸಂಸ್ಥಾಪನಾ ದಿನಾಚರಣೆಯನ್ನು ಅ. 10ರಂದು ಬೆಳಗ್ಗೆ 11 ಗಂಟೆಗೆ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಚರಿಸಲಾಗುವುದು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಕುಲಪತಿ ಡಾ. ಪಿ.ಎಲ್. ಪಾಟೀಲ ಅಧ್ಯಕ್ಷತೆ ವಹಿಸುವರು. ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ- ಶಿಕ್ಷಕಿ, ಅತ್ಯುತ್ತಮ ಸಂಶೋಧನಾ ವಿಜ್ಞಾನಿ, ಅತ್ಯುತ್ತಮ ವಿಸ್ತರಣಾ ವಿಜ್ಞಾನಿ, ಅತ್ಯುತ್ತಮ ಯುವ ವಿಜ್ಞಾನಿ, ಬಾಹ್ಯ ಸಂಸ್ಥೆಗಳಿ0ದ ಅನುದಾನಿತ ಯೋಜನೆಗಳನ್ನು ದೊರಕಿಸಿಕೊಟ್ಟ ವಿಜ್ಞಾನಿಗಳು ಮತ್ತು ಅತ್ಯುತ್ತಮ ಸೇವಾ ಸಿಬ್ಬಂದಿ, ಸಂಶೋಧನಾ ಕೇಂದ್ರ ಹಾಗೂ ಪ್ರತಿ ಮಹಾವಿದ್ಯಾಲಯದ ಒಬ್ಬ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಅತ್ಯುತ್ತಮ ಹೊರ ಹೋಗುತ್ತಿರುವ ವಿದ್ಯಾರ್ಥಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net