ನೆಲ, ಜಲ ಸಂಪನ್ಮೂಲಗಳು ನಾಗರಿಕತೆಯ ಭದ್ರ ಬುನಾದಿ

20 Dwd 5
Published on

ಧಾರವಾಡ: ವಾಲ್ಮಿ ಸಂಸ್ಥೆಯು ಸುಸ್ಥಿರ ಜಲ ಮತ್ತು ನೆಲ ನಿರ್ವಹಣೆಯ ಕ್ಷೇತ್ರದ ಆಶಾಕಿರಣವಾಗಿದೆ. ಜಲ ಮತ್ತು ನೆಲ ಕುರಿತು ತರಬೇತಿ, ಸಂಶೋಧನೆ, ಸಮುದಾಯ ಸಂಘಟನೆ, ಜಲಜಾಗೃತಿ ಕುರಿತು ಅಗಾಧ ಸೇವೆ ನೀಡಿದೆ. ಜಲ ಮತ್ತು ನೆಲ ಸಂಪನ್ಮೂಲಗಳು ನಾಗರಿಕತೆಯ ಭದ್ರ ಬುನಾದಿಯಾಗಿವೆ ಎಂದು ಪುಣೆಯ ರಾಷ್ಟ್ರೀಯ ಜಲ ಅಕಾಡೆಮಿ ನಿರ್ದೇಶಕ ಮಿಲಿಂದ ಪಾನಪಾಟೀಲ ಹೇಳಿದರು.
ನಗರದ ವಾಲ್ಮಿ ಸಂಸ್ಥೆಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವಾಲ್ಮಿಯ 39ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನಸಂಖ್ಯೆ ಬೆಳವಣಿಗೆ, ನಗರೀಕರಣ ಮತ್ತು ಇತ್ತೀಚಿನ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಜಲ, ನೆಲ ನಿರ್ವಹಣೆ ಸವಾಲಾಗಿದೆ. ವಾಲ್ಮಿ ಸಂಸ್ಥೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜಲಶಕ್ತಿ ಯೋಜನೆ, ಅಟಲ್ ಭೂಜಲ ಯೋಜನೆ, ರಾಷ್ಟ್ರೀಯ ಜಲ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ ಎಂದರು.
ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಡಾ. ಎಂ. ಚಂದ್ರ ಪೂಜಾರಿ ಮಾತನಾಡಿ, ಕೃಷಿ ವಲಯ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಯುವಕರು ಕೃಷಿಯನ್ನು ತೊರೆಯುತ್ತಿರುವುದು ಕಳವಳಕಾರಿಯಾಗಿದೆ. ಜಲ, ನೆಲ ನಿರ್ವಹಣೆ, ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ಸರ್ಕಾರಿ ಸಂಸ್ಥೆಗಳು ಶ್ರಮಿಸಿದರೆ ಸಾಲದು. ಇದು ಜನಾಂದೋಲನವಾಗಿ ರೂಪುಗೊಳ್ಳಬೇಕು ಎಂದರು.
ವಾಲ್ಮಿ ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಮಾತನಾಡಿ, ಸಂಸ್ಥೆಯು ಸಂಶೋಧನೆ ಮತ್ತು ಪ್ರಾತ್ಯಕ್ಷಿಕೆಗಳ ಮೂಲಕ ವೈಜ್ಞಾನಿಕ ನೀರಾವರಿಯನ್ನು ಅನುಷ್ಠಾನಗೊಳಿಸಲು ಶ್ರಮಿಸುತ್ತಿದೆ. ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ಜಾಗತಿಕ ಜಲ ಸಂಕಷ್ಟದಿ0ದ ಪಾರಾಗಲು ವಾಲ್ಮಿಯು ಪಾತ್ರ ನಿರ್ಣಾಯಕವಾಗಲಿದೆ ಎಂದರು.
ರಾಷ್ಟಿçÃಯ ವಿಽವಿಜ್ಞಾನ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಮಂಜುನಾಥ ಘಾಟೆ, ಡಾ. ಎಂ.ವಿ. ಮಂಜುನಾಥ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net