3ನೇ ಅಲೆ ನಿಯಂತ್ರಣಕ್ಕೂ ಸಿದ್ಧರಾಗಿ

10 KKP 2
Published on

ಚನ್ನಪಟ್ಟಣ: ಕೋವಿಡ್ ನಿರ್ವಹಣೆ ಕೇವಲ ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ವಿಚಾರವಲ್ಲ. ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ತಹಸೀಲ್ದಾರ್ ಎಲ್. ನಾಗೇಶ್ ಹೇಳಿದರು.

ನಗರದ ತಾಲೂಕು ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಬುಧವಾರ 2022ರ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ, ಕರೊನಾ ಮೊದಲ ಮತ್ತು ಎರಡನೇ ಅಲೆ ನಿರ್ವಹಣೆಯಲ್ಲಿ ಸರ್ಕಾರಿ ಅಧಿಕಾರಿಗಳ ಕಾರ್ಯಕ್ಕೆ ಕೈಜೋಡಿಸಿದಂತೆ 3ನೇ ಅಲೆ ನಿಯಂತ್ರಣಕ್ಕೂ ಪ್ರತಿಯೊಬ್ಬರೂ ಸಿದ್ಧತೆ ಮಾಡಿಕೊಳ್ಳಬೇಕು. ಲಾಕ್‌ಡೌನ್, ರೋಗಿಗಳ ಪತ್ತೆ ಕಾರ್ಯ, ಜಾಗೃತಿ, ಮೂಡಿಸುವಲ್ಲಿ ವಿವಿಧ ಇಲಾಖೆಗಳೊಂದಿಗೆ ಸಂಪರ್ಕ ಸಾಧಿಸಿ, ್ರೆಂಟ್‌ಲೈನ್ ವಾರಿಯರ್ಸ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಸತೀಶ್ ಮಾತನಾಡಿ, ಸಂಘಟನೆ ವಿಚಾರದಲ್ಲಿ ಪ್ರತಿಯೊಬ್ಬರೂ ಸಕ್ರಿಯರಾಗಿರಬೇಕು. ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರ ಹಿತರಕ್ಷಣೆಗೆ ರಾಜ್ಯಾಧ್ಯಕ್ಷ ಷಡಾಕ್ಷರಿ ಶ್ರಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಶಾಲಾ ಮಕ್ಕಳಿಗೆ ಪತ್ರಿಭಾ ಪುರಸ್ಕಾರ, ಸರ್ಕಾರಿ ನೌಕರರಿಗೆ ಸೇವಾರತ್ನ ಪ್ರಶಸ್ತಿ ಸೇರಿ ಹಲವು ಸಾಮಾಜಿಕ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಘದ ಕಾರ್ಯ ಚಟುವಟಿಕೆಯನ್ನು ವಿಸ್ತರಿಸಲಾಗುವುದು ಎಂದರು.

ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ರಾಜಶೇಖರ್ ಮಾತನಾಡಿ, ಉತ್ತಮ ಕಾರ್ಯಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ತಾಲೂಕು ಸರ್ಕಾರಿ ನೌಕರರ ಸಂಘ ಕ್ರಿಯಾಶೀಲವಾಗಿದೆ ಎಂದರು. ತಾ.ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಎಚ್.ಎಸ್.ಚಂದ್ರಶೇಖರ್ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಕೃಷ್ಣಾಪುರ ಶಿವಕುಮಾರ್ (ಅಕ್ಷರ ಬೆಳಕು), ರಾಜ್ಯ ಪರಿಷತ್ ಸದಸ್ಯ ಶಂಭುಗೌಡ, ಆರೋಗ್ಯ ಇಲಾಖೆ ತಾ. ಅಧ್ಯಕ್ಷ ಎಂ.ಪಿ.ಗುಂಡಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎನ್. ನಾಗೇಶ್, ಉಪ ತಹಸೀಲ್ದಾರ್ ಸೋಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net