

ಚಿತ್ರದುರ್ಗ:ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕ ಹಾಗೂ ಕೃಷಿ ಇಲಾಖೆ ಇವರ ಸಹಯೋಗದಲ್ಲಿ ಆ.3ರಂದು ಬೆಳಗ್ಗೆ 11ಕ್ಕೆ ನಗ ರದ ಕೃಷಿ ತಂತ್ರಜ್ಞರ ಸಂಸ್ಥೆಯ ಸಭಾಂಗಣದಲ್ಲಿ ಕಾರ್ಬನ್ ಸೀಕ್ವೆಸ್ಟ್ರೇಶನ್-ವ್ಯಾಖ್ಯಾನ,ಅನುಕೂಲಗಳು ಹಾಗೂ ಅನಾನುಕೂಲಗಳು,ಇಂ ಗಾಲದ ವ್ಯಾಪಾರ ಪ್ರಕ್ರಿಯೆ ಮತ್ತು ಪ್ರಾಮುಖ್ಯತೆಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಉದ್ಘಾಟಿಸು ವರು. ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್,ಡಿಸಿಎಫ್ ಟಿ.ರಾಜಣ್ಣ ಮತ್ತಿತರ ಗಣ್ಯರು ಪಾಲ್ಗೊಳ್ಳುವರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಅರಣ್ಯಶಾಸ್ತ್ರ ಮತ್ತು ಪರಿಸರ ವಿಜ್ಞಾನ ವಿಭಾ ಗದ ಮುಖ್ಯಸ್ಥ ಡಾ.ದೇವಕುಮಾರ್ ಉಪನ್ಯಾಸ ನೀಡುವರೆಂದು ಕೃಷಿ ತಂತ್ರಜ್ಞರ ಸಂಸ್ಥೆಯ ಕಾರ‌್ಯದರ್ಶಿ ಜಿ.ಟಿ.ವೀರಭದ್ರರೆಡ್ಡಿ ತಿಳಿಸಿದ್ದಾರೆ.