3ರಂದು ಶಿಕ್ಷಕರ ಅರ್ಹತಾ ಪರೀಕ್ಷೆ,ಎಚ್ಚರ ವಹಿಸಿ

IMG-20230828-WA0027--04
Published on

ಚಿತ್ರದುರ್ಗ:ಜಿಲ್ಲೆಯಲ್ಲಿ ಸೆಪ್ಟೆಂಬರ್3ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳಾಗಬಾರದು ಎಂದು ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಸೋಮವಾರ ಡಿಸಿ ಕಚೇರಿಯಲ್ಲಿ ಪರೀಕ್ಷೆ ಪೂ ರ್ವಸಿದ್ಧತಾ ಸಭೆಯಲ್ಲಿ ಮಾ ತನಾಡಿದ ಅವರು,ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯಗಳಿರ ಬೇಕು,ಪರಿಶೀಲಿಸಿ ಸೌಕರ್ಯಗಳ ಕೊರತೆ ಸರಿಪಡಿಸುವಂತೆ ಸೂಚಿಸಿದರು.
ಅಭ್ಯರ್ಥಿಗಳಿಗೆ ಗುರುತಿನ ಚೀಟಿ ಕಡ್ಡಾಯ,ಕೇಂದ್ರ ಪ್ರವೇಶಕ್ಕೂ ಮೊದಲು ಅವರನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸಬೇಕು.ಪರೀಕ್ಷಾ ನಿಯೋಜಿತ ಅಧಿಕಾರಿಗಳನ್ನು ಹೊರತುಪಡಿಸಿ ಅನ್ಯರಿಗೆ ಕೇಂದ್ರಗಳಿಗೆ ಪ್ರವೇಶ ನೀಡುವಂತಿಲ್ಲ. ಜಿಲ್ಲಾ ಖಜಾನೆಯಲ್ಲಿರುವ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಬಂಡಲ್‌ಗಳನ್ನು ಬೆಳಗ್ಗೆ 7.30ಕ್ಕೆ ಹಾಗೂ ಮಧ್ಯಾಹ್ನ 12.30ಕ್ಕೆ ಮಾರ್ಗಾಧಿಕಾರಿಗಳಿಗೆ ವಿತರಿಸಿ,ನಿಗದಿತ ಸಮಯದೊಳಗೆ ಕೇಂದ್ರಗಳನ್ನು ತಲುಪುವಂತೆ ನೋಡಿಕೊಳ್ಳಬೇಕು. ಪ್ರತಿ ಕೇಂದ್ರದಲ್ಲೂ ಆರೋಗ್ಯ ಸಹಾಯಕರನ್ನು ನೇಮಿಸ ಬೇಕೆಂದರು.
ಜಿಲ್ಲೆಯ 20 ಕೇಂದ್ರಗಳಲ್ಲಿಯ ಬೆಳಗಿನ ಪರೀಕ್ಷಾ ಅವಧಿಗೆ 5766 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 30 ಕೇಂದ್ರಗಳಲ್ಲಿ ನಡೆಯಲಿರುವ ಪ ರೀಕ್ಷೆಗೆ 8009 ಅಭ್ಯರ್ಥಿಗಳು ನೋಂದಾಯಿಸಿದ್ದಾರೆಂದು ಡಿಡಿಪಿಐ ಕೆ.ರವಿಶಂಕರರೆಡ್ಡಿ ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು,ಪೊಲೀಸ್, ಶಿಕ್ಷಣ,ಖಜಾನೆ ಹಾಗೂ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು ಇದ್ದರು.

(ಡಿಸಿ ಮಗ್‌ಶಾಟ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net