3ರಿಂದ ಎನ್ಎಸ್ಎಸ್ ಭಾವೈಕ್ಯತಾ ಶಿಬಿರ

Published on

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಫೆ.3ರಿಂದ 9ರವರೆಗೆ ನಗರದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಎಂ.ಬಿ.ಸುರೇಶ್ ತಿಳಿಸಿದರು.
ಸರಸ್ವತಿಪುರಂನಲ್ಲಿರುವ ಎನ್‌ಎಸ್‌ಎಸ್ ಭವನದಲ್ಲಿ ಆಯೋಜಿಸಿರುವ ಶಿಬಿರದಲ್ಲಿ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕೇರಳ ಸೇರಿದಂತೆ ದ ವಿವಿಧ ವಿವಿಗಳಿಂದ ಸುಮಾರು 180 ಎನ್‌ಎಸ್‌ಎಸ್ ಸ್ವಯಂ ಸೇವಕ, ಸೇವಕಿಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಶಿಬಿರದಲ್ಲಿ ಶ್ರಮದಾನ, ವಿಶೇಷ ಉಪನ್ಯಾಸ, ಸಾಂಸ್ಕೃತಿಕ ಸ್ಪರ್ಧೆ, ಕ್ರೀಡಾ ಚಟುವಟಿಕೆ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಫೆ.3ರ ಬೆಳಗ್ಗೆ 11ಕ್ಕೆ ವಿವಿ ಕುಲಪತಿ ಅಧ್ಯಕ್ಷತೆಯಲ್ಲಿ ಉದ್ಘಾಟನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಆಯೋಜಕರಾದ ಕೆ.ಎಂ.ವೀರಯ್ಯ, ಡಾ.ನಿಂಗರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net