3ರಿಂದ ಸೀರತ್ ಅಭಿಯಾನ

ctd===2
Published on

ಚಿತ್ರದುರ್ಗ: ಪ್ರವಾದಿ ಮಹಮದ್ ಪೈಗಂಬರ್ ಅವರ ಜನ್ಮ ದಿನದ ಅಂಗವಾಗಿ ಸೆ.3ರಿಂದ 14ರವರೆಗೆ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯಕರ್ತ ಅಬ್ದುಲ್‌ರೆಹಮಾನ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರವಾದಿ ಮಹಮದ್ ಪೈಗಂಬರ್ ಅವರು ಇಡೀ ಮನುಕುಲಕ್ಕೆ ಶಾಂತಿಯ ಸಂದೇಶ ಸಾರಿದ್ದಾರೆ. ಸಕಲ ಜೀವರಾಶಿಗಳಿಗೂ ಒಳಿತನ್ನು ಬಯಸಿದ್ದಾರೆ. ಅವರ ಜೀವನ ಮತ್ತು ಸತ್ಯ ಸಂದೇಶವನ್ನು ಈ ಅಭಿಯಾನದ ಮೂಲಕ ಜನರ ಬಳಿಗೆ ಕೊಂಡೊಯ್ಯಲಾಗುವುದು ಎಂದು ತಿಳಿಸಿದರು.

ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರ ಆಯೋಜನೆ, ವೃದ್ಧಾಶ್ರಮ, ಅನಾಥಾಶ್ರಮಗಳ ಭೇಟಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಪ್ರವಚನ, ವಿಚಾರ ಗೋಷ್ಠಿ, ಸಂವಾದ, ವಿಚಾರ ವಿನಿಮಯ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರವಾದಿ ಮಹಮದ್ ಪೈಗಂಬರ್ ಅವರ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಜಮಾಅತೆ ಇಸ್ಲಾಮಿ ಹಿಂದ್ ಶಿವಮೊಗ್ಗ ವಲಯ ಸಂಚಾಲಕ ಸಲೀಂ ಉಮ್ರಿ, ಜಿಲ್ಲಾ ಸಂಚಾಲಕ ಮುಕರ‌್ರಂ ಸಯೀದ್, ಝಬೇರ್ ಅನ್ಸಾರಿ, ಡಾ. ರಹಮತ್‌ವುಲ್ಲಾ, ಸಿರಾಜುದ್ದೀನ್, ಫೈಜಾನ್, ಹಮ್ಮಾದ್ ಸುವೇದ್, ಟಿ. ಶಫಿವುಲ್ಲಾ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net