

ಕಲಬುರಗಿ : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಲಬುರಗಿ ಜಿಲ್ಲಾ ಶಾಖೆಯ ೨೦೨೨-೨೩ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಆ.೩೦ ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ. ಸಂಸ್ಥೆಯ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಎಲ್ಲ ಸದಸ್ಯರು ಪಾಲ್ಗೊಳ್ಳುವಂತೆ ಸಭಾಪತಿ ಅಪ್ಪಾರಾವ ಅಕ್ಕೋಣಿ ಮತ್ತು ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ತಿಳಿಸಿದ್ದಾರೆ.